ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ | ಗೀತಾ ಆಯ್ಕೆಯಲ್ಲಿ ಒಳ ಒಪ್ಪಂದ ರಾಜಕಾರಣ ನಡೆದಿಲ್ಲ: ಭಂಡಾರಿ ಸ್ಪಷ್ಟನೆ

Published 1 ಏಪ್ರಿಲ್ 2024, 9:23 IST
Last Updated 1 ಏಪ್ರಿಲ್ 2024, 9:23 IST
ಅಕ್ಷರ ಗಾತ್ರ

ಶಿವಮೊಗ್ಗ: ‘ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಸ್ಪರ್ಧಿಸಿರುವ ಗೀತಾ ಶಿವರಾಜಕುಮಾರ್ ಡಮ್ಮಿ ಅಭ್ಯರ್ಥಿ ಅಲ್ಲ, ಅವರನ್ನು ಆಯ್ಕೆ ಮಾಡುವಲ್ಲಿ ಯಾವುದೇ ಒಳ ಒಪ್ಪಂದ ರಾಜಕಾರಣ ಕಾಂಗ್ರೆಸ್ ಮಾಡಿಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆದ ಶಿವಮೊಗ್ಗ ಕ್ಷೇತ್ರದ ಚುನಾವಣಾ ಉಸ್ತುವಾರಿ ಮಂಜುನಾಥ ಭಂಡಾರಿ ಸ್ಪಷ್ಟಪಡಿಸಿದರು.

ನಗರದಲ್ಲಿ ಸೋಮವಾರ ಸುದ್ದಿ ಗೋಷ್ಟಿಯಲ್ಲಿ ಮಾತನಾಡಿದ ಮಂಜುನಾಥ ಭಂಡಾರಿ, '2014 ರ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ನಾನು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದೆನು. ಗೀತಾ ಶಿವರಾಜಕುಮಾರ್ ಜೆಡಿಎಸ್ ಅಭ್ಯರ್ಥಿಯಾಗಿದ್ದರು. ಆಗ ಮತಗಳು ವಿಭಜನೆಯಾಗಿದ್ದರಿಂದ ಇಬ್ಬರೂ ಸೋಲಬೇಕಾಯಿತು. ಗೀತಾ ಅವರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಆಗಿದ್ದಾರೆ. ಅವರ ತಂದೆ ಬಂಗಾರಪ್ಪನವರ ಹೆಸರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಟ್ಟ ಗ್ಯಾರಂಟಿ ಕಾರ್ಯಕ್ರಮಗಳಿಂದ ಈ ಬಾರಿ ನಿಶ್ಚಿತವಾಗಿ ಗೆಲುವು ಸಾಧಿಸಲಿದ್ದಾರೆ' ಎಂದು ಹೇಳಿದರು.

ಬಿಜೆಪಿಯಿಂದ ದೇಶದಲ್ಲಿ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಮುಗಿಸುವ ಕೆಲಸ ನಡೆದಿದೆ. ಹೀಗಾಗಿ ಸಂವಿಧಾನಕ್ಕೆ ಬಿಕ್ಕಟ್ಟು ಬಂದಿದೆ ಎಂದು ಆರೋಪಿಸಿದ ಅವರು, ಬಿಜೆಪಿ ಸಿಬಿಐ, ಇ.ಡಿ ಯಂತಹ ಸಂವಿಧಾನಿಕ ಸಂಸ್ಥೆಗಳನ್ನು ಬಳಸಿಕೊಂಡು ಬೇರೆ ಬೇರೆ ಪಕ್ಷಗಳಲ್ಲಿನ ಭ್ರಷ್ಟರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಂಡು ಅವರನ್ನು ನಿರಪರಾಧಿ ಎಂದು ಕ್ಲೀನ್ ಚಿಟ್ ನೀಡಿ ಶುದ್ದೀಕರಿಸುತ್ತಿದೆ. ಅರವಿಂದ ಕೇಜ್ರಿವಾಲ್ ಅವರನ್ನು ಚುನಾವಣಾ ಸಮಯದಲ್ಲಿ ಜೈಲಿಗೆ ಕಳುಹಿಸುವ ಮೂಲಕ ಪ್ರತಿಪಕ್ಷಗಳನ್ನು ಹತ್ತಿಕ್ಕುವ ಕೆಲಸ ನಡೆದಿದೆ. ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳ ಬಂದ್ ಮಾಡುವ ಮೂಲಕ ಚುನಾವಣೆ ಗೆಲ್ಲಲು ಹೊರಟಿದೆ ಎಂದರು.

ಚುನಾವಣಾ ಬಾಂಡ್ ವಿಚಾರದಲ್ಲಿ ಬಿಜೆಪಿಗೆ ಇಲ್ಲದ ನೋಟಿಸ್ ಕಾಂಗ್ರೆಸ್ ಗೆ ನೀಡಲಾಗುತ್ತಿದೆ. ಎಲ್ಲರಿಗೂ ಕಾನೂನು ಒಂದೆ ಆಲ್ವವೆ? ಅರುಣಾಚಲ ಪ್ರದೇಶದಲ್ಲಿ ಪ್ರತಿಪಕ್ಷಗಳ ಅಭ್ಯರ್ಥಿಗಳನ್ನು ಹೆದರಿಸಿ ಕಣದಿಂದ ಹಿಂದಕ್ಕೆ ಸರಿಸಲಾಗುತ್ತಿದೆ. ಬಿಜೆಪಿ ಧರ್ಮ. ಮಂದಿರ ಭಾವನಾತ್ಮಕ ಸಂಗತಿಗಳಿಂದ ಓಟು ಕೇಳುತ್ತಿದೆ. ಆದರೆ ಕಾಂಗ್ರೇಸ್ ತನ್ನ ಗ್ಯಾರಂಟಿ ಮತ್ತು ಪ್ರಗತಿಪರ ವಿಚಾರಗಳನ್ನಿಟ್ಟುಕೊಂಡು ಮತ ಕೇಳುತ್ತಿದೆ. ಇಂದುಪ್ರಜಾಪ್ರಭುತ್ವವನ್ನು ಉಳಿಸಬೇಕಿದೆ. ಸಂವಿಧಾನವನ್ನು ಬದಲಿಸಲು ಬಿಜೆಪಿ ಒಂದೊಂದೆ ಪ್ರಯತ್ನ ಮಾಡುತ್ತಿದೆ ಎಂದರು.

ಕಾಂಗ್ರೆಸ್ ಗ್ಯಾರಂಟಿ ಕಾರ್ಯಕ್ರಮಗಳ ಮೂಲಕ ಮತ ಕೇಳುತ್ತಿದ್ದೇವೆ. ಇದೆ ಗ್ಯಾರಂಟಿ ಯೋಜನೆಗಳನ್ನು ಲೇವಡಿ ಮಾಡಿದ್ದ ಬಿಜೆಪಿ ಇದೀಗ ಮೋದಿ ಹೆಸರಿನಲ್ಲಿ ಗ್ಯಾರಂಟಿಗಳನ್ನು ಪ್ರಕಟಿಸಿ ಜನರ ಮುಂದೆ ಬಂದಿದೆ. ಅದು ಮೋದಿ ಹೆಸರಿನ ವ್ಯಕ್ತಿಗತ ಗ್ಯಾರಂಟಿ.ಆದರೆ ಕಾಂಗ್ರೆಸ್ ಪಕ್ಷ ಜನರ ಕಲ್ಯಾಣಕ್ಕೆ ಪೂರಕ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ರಾಷ್ಟ್ರಪ್ರೇಮವನ್ನು ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ. ರಾಷ್ಟ್ರ ಪ್ರೇಮ ಎಂಬುದು ಕಾಂಗ್ರೆಸ್ ಕಾರ್ಯಕರ್ತರ ಡಿಎನ್ ಎಯಲ್ಲೆ ಇದೆ ಎಂದರು.

ಸುದ್ದಿಗೋಷ್ಟಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್. ಎಸ್. ಸುಂದರೇಶ್, ಕೆಪಿಸಿಸಿ ಚುನಾವಣಾ ಉಸ್ತುವಾರಿ ಅನಿಲ್ ಕುಮಾರ್, ಜಿಲ್ಲಾ ಪ್ರಚಾರಸಮಿತಿ ಅಧ್ಯಕ್ಷ ಎನ್.ರಮೇಶ್, ಮುಖಂಡರಾದ ಎಚ್. ಸಿ ಯೋಗೀಶ್, ಕಾಶಿವಿಶ್ವನಾಥ್ , ಗ್ಯಾರಂಟಿ ಅನುಷ್ಠಾನಸಮಿತಿ ಅಧ್ಯಕ್ಷ ಚಂದ್ರಭೂಪಾಲ್ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT