ಶಿಕಾರಿಪುರ: ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ನಿವಾಸದ ಮೇಲೆ ನಡೆದ ಕಲ್ಲು ತೂರಾಟದಲ್ಲಿ ಕಾಂಗ್ರೆಸ್ ಪಾತ್ರವಿಲ್ಲ ಎಂದು ಕೆಪಿಸಿಸಿ ಸದಸ್ಯ ಗೋಣಿ ಮಾಲತೇಶ್ ತಿಳಿಸಿದರು.
‘ಒಳಮೀಸಲಾತಿ ಜಾರಿಯಿಂದ ಆಗುವ ಅನ್ಯಾಯ ಖಂಡಿಸಿ ಬಂಜಾರ ಸಮಯದಾಯ ಪ್ರತಿಭಟನೆ ನಡೆಸಿದ್ದರಲ್ಲಿ ಕಾಂಗ್ರೆಸ್ ಪಾತ್ರವಿಲ್ಲ. ಆದರೆ ಮುಖ್ಯಮಂತ್ರಿ ಹಾಗೂ ಸಚಿವರು ಕಾಂಗ್ರೆಸ್ ಗುರಿಯಾಗಿಸಿಕೊಂಡು ಹೇಳಿಕೆ ನೀಡುತ್ತಿರುವುದು ಖಂಡನೀಯ. ಯಡಿಯೂರಪ್ಪ ತಮ್ಮ ನಿವಾಸಕ್ಕೆ ಕಲ್ಲು ತೂರಿದ ಯಾರನ್ನೂ ಬಂಧಿಸಬೇಡಿ ಎಂದು ಹೇಳಿದ್ದರೂ ಪೊಲೀಸ್ ಅಧಿಕಾರಿಗಳು ಯುವಕರನ್ನು ಬಂಧಿಸಿ ಮೊಕದ್ದಮೆ ದಾಖಲಿಸಿರುವುದು ಖಂಡನೀಯ’ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
‘ಪ್ರತಿಭಟನೆಯಲ್ಲಿ ನಡೆದ ಹಿಂಸಾಚಾರಕ್ಕೂ ಕಾಂಗ್ರೆಸ್‌ಗೂ ಸಂಬಂಧ ಇಲ್ಲ. ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರೇ ಮುಂಚೂಣಿಯಲ್ಲಿದ್ದರು. ಪೊಲೀಸರು ಅಮಾಯಕರ ಮೇಲೆ ಲಾಠಿ ಪ್ರಹಾರ ನಡೆಸಿದ ಪರಿಣಾಮ ಆಕ್ರೋಶಗೊಂಡ ಸಮುದಾಯದವರು ಪೊಲೀಸರ ಮೇಲೆ ಕಲ್ಲು ತೂರುವಂತಾಯಿತು’ ಎಂದು ರಾಜ್ಯ ತಾಂಡಾ ಅಭಿವೃದ್ಧಿ ನಿಗಮದ ಮಾಜಿ ನಿರ್ದೇಶಕ ಶಿವ್ಯಾನಾಯ್ಕ ಹೇಳಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹುಲ್ಮಾರ್ ಮಹೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಪಿ. ನಾಗರಾಜ್ ಗೌಡ, ಮುಖಂಡರಾದ ತಿಮ್ಮಣ್ಣ, ಆನಂದಪ್ಪ, ಮಾರವಳ್ಳಿ ಉಮೇಶ್, ಉಳ್ಳಿ ದರ್ಶನ್, ಮಂಜ್ಯಾನಾಯ್ಕ, ಚೆನ್ನಾನಾಯ್ಕ
ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.