ಕಾರ್ಗಲ್ (ಶಿವಮೊಗ್ಗ): ಜೋಗ ನಿರ್ವಹಣಾ ಪ್ರಾಧಿಕಾರದ ಪ್ರವೇಶ ದ್ವಾರ ಬಿಟ್ಟು ಉಳಿದ ಸ್ಥಳಗಳಿಂದ ಜೋಗ ಜಲಪಾತ ವೀಕ್ಷಿಸಲು ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಗಿದೆ.

ಮುಖ್ಯ ರಸ್ತೆಯ ವೀವ್ ಪಾಯಿಂಟ್, ಯಾತ್ರಿ ನಿವಾಸ, ರಾಣಿ ಫಾಲ್ಸ್, ಮುಂಬಯಿ ಬಂಗಲೆ, ಮುಂಗಾರು ಮಳೆ ಪಾಯಿಂಟ್ ಸೇರಿದಂತೆ ಇತರೆ ಸ್ಥಳಗಳಿಂದ ಪ್ರವಾಸಿಗರು ಜಲಪಾತದ ಸೊಬಗು ಕಣ್ತುಂಬಿಕೊಳ್ಳಬಹುದು ಎಂದು ಭಾನುವಾರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಜೋಗ ಜಲಪಾತದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಜಲಪಾತ ವೀಕ್ಷಿಸಲು ತೆರಳುವ ಮುಖ್ಯ ಪ್ರವೇಶ ದ್ವಾರದ ಗೋಪುರ ನಿರ್ಮಾಣ ಕಾಮಗಾರಿಯೂ ಪ್ರಗತಿಯಲ್ಲಿದೆ. ಆದ್ದರಿಂದ ಜ.1ರಿಂದ ಮಾರ್ಚ್ 15ರವರೆಗೆ ಪ್ರವಾಸಿಗರಿಗೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಈಚೆಗೆ ಆದೇಶ ಹೊರಡಿಸಿದ್ದರು.

ಪ್ರತಿ ವರ್ಷ ಡಿಸೆಂಬರ್ ಕೊನೆಯ ವಾರದಲ್ಲಿ ಜೋಗದಲ್ಲಿ ಪ್ರವಾಸಿಗರ ದಟ್ಟಣೆ ಕಂಡುಬರುತ್ತಿತ್ತು. ಈ ಬಾರಿ ನಿರ್ಬಂಧದ ಆದೇಶ ಜಾರಿಗೊಳ್ಳುವ ಮುನ್ನವೇ ಪ್ರವಾಸಿಗರ ಸಂಖ್ಯೆಯಲ್ಲಿ ಇಳಿಕೆಯಾಗಿತ್ತು. ತಳಕಳಲೆ ಜಂಗಲ್ ಲಾಡ್ಜ್ ರೆಸಾರ್ಟ್, ಮುಪ್ಪಾನೆ ನೇಚರ್ ಕ್ಯಾಂಪ್, ವಡನ್ ಬೈಲು ಬಳೆ ಪದ್ಮಾವತಿ ದೇವಸ್ಥಾನ, ಕಾರ್ಗಲ್ ಚೌಡೇಶ್ವರಿ ದೇವಸ್ಥಾನ, ದ್ವಿಮುಖ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದ ಪ್ರವಾಸಿಗರ ಸಂಖ್ಯೆಯೂ ತಗ್ಗಿತ್ತು.

‘ಮುಖ್ಯ ಪ್ರವೇಶ ದ್ವಾರ ಬಿಟ್ಟು ಉಳಿದ ಸ್ಥಳಗಳಲ್ಲಿ ತಡೆಬೇಲಿಗಳನ್ನು ನಿರ್ಮಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಭದ್ರತಾ ಸಿಬ್ಬಂದಿಯನ್ನೂ ನೇಮಿಸಿ ಜಲಪಾತ ವೀಕ್ಷಣೆಗೆ ಅನುವು ಮಾಡಿಕೊಡಲಾಗಿದೆ’ ಎಂದು ಪ್ರವಾಸೋದ್ಯಮ ಇಲಾಖೆಯ ಜಂಟಿ ಕಾರ್ಯದರ್ಶಿ ಧರ್ಮಪ್ಪ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.