ಗುರುವಾರ , ಜುಲೈ 16, 2020
25 °C

ಸರ್ಕಾರಿ ಕಚೇರಿಗಳ ಸೀಲ್‌ಡೌನ್ ಇಲ್ಲ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಕೋವಿಡ್‌ ಪೀಡಿತ ಬಾಲಕಿಯ ಸಂಪರ್ಕಕ್ಕೆ ಬಂದ ಕಾರಣ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿ ಸೇರಿದಂತೆ ಕೆಲವು ಸರ್ಕಾರಿ ಕಚೇರಿಗಳನ್ನು ಸೀಲ್‌ಡೌನ್ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಸುದ್ದಿಗಳನ್ನು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ನಿರಾಕರಿಸಿದರು.

ಜಿಲ್ಲೆಯ ಯಾವುದೇ ಸರ್ಕಾರಿ ಕಚೇರಿಗಳನ್ನೂ ಸೀಲ್‍ಡೌನ್ ಮಾಡಿಲ್ಲ.  ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಮೂವರು ಪೊಲೀಸ್ ಅಧಿಕಾರಿಗಳು ಕ್ವಾರೆಂಟೈನ್‍ನಲ್ಲಿದ್ದಾರೆ. ಮುಂಜಾಗರೂಕತಾ ಕ್ರಮವಾಗಿ 11 ಪೊಲೀಸ್ ಅಧಿಕಾರಿಗಳ ಗಂಟಲು ದ್ರವದ ಪರೀಕ್ಷೆ ನಡೆಸಲಾಗಿದೆ. ಪೊಲೀಸ್ ಇಲಾಖೆಯಲ್ಲಿ ಹೆಚ್ಚುವರಿ ಕರ್ತವ್ಯಕ್ಕಾಗಿ ಬೇರೆ ಜಿಲ್ಲೆಯ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಎಲ್ಲಾ ಸರ್ಕಾರಿ ಕಚೇರಿಗಳಿಗೂ ಕ್ರಿಮಿನಾಶಕ ಸಿಂಪಡಣೆ ಮಾಡಲು ಸೂಚಿಸಲಾಗಿದೆ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ನಿತ್ಯವೂ ಸರಾಸರಿ 70 ಜನರ ಆಗಮನ: ಪ್ರಸ್ತುತ ಜಿಲ್ಲೆಗೆ ಪ್ರತಿದಿನ 50ರಿಂದ 70 ಜನರು ಹೊರ ರಾಜ್ಯಗಳಿಂದ ಬರುತ್ತಿದ್ದಾರೆ. ಇದುವರೆಗೆ 5,172 ಮಂದಿಯ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆ ಮಾಡಲಾಗಿದೆ. 4,828 ಫಲಿತಾಂಶ ಬಂದಿದೆ. 320 ಜನರ ಫಲಿತಾಂಶ ಬರಬೇಕಿದೆ. 4,804 ನೆಗೆಟಿವ್ ಬಂದಿದೆ. ಹೊರ ರಾಜ್ಯಗಳಿಂದ ಬಂದಿರುವ 1,158 ಜನರನ್ನು ಕ್ವಾರೆಂಟೈನ್ ಮಾಡಲಾಗಿದೆ. 943 ಫಲಿತಾಂಶ ಬಂದಿದೆ ಎಂದರು.

ಒಂದೇ ದಿನ 329 ಜನರ ಪರೀಕ್ಷೆ: ಮಂಗಳವಾರ ಒಂದೇ ದಿನ ಜಿಲ್ಲೆಯಲ್ಲಿ 329 ಮಂದಿಯ ಗಂಟಲ ದ್ರವ ಸಂಗ್ರಹಿಸಿ, ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಕಂಡು ಬಂದಿದ್ದ ಪಾಸಿಟಿವ್ ಪ್ರಕರಣಗಳಲ್ಲಿ  ಪ್ರಾಥಮಿಕ ಸಂಪರ್ಕದಲ್ಲಿದ್ದ ಎಲ್ಲರ ಗಂಟಲ ದ್ರವ ತಪಾಸಣೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಎರಡನೇ ಹಂತದ ಸಂಪರ್ಕ ಹೊಂದಿದ್ದವರ ತಪಾಸಣೆ ನಡೆಸಲಾಗುವುದು ಎಂದರು.

ಲಾಕ್‍ಡೌನ್ ಸಡಿಲಿಕೆ ಮಾಡಿದ್ದರೂ ಅನಗತ್ಯವಾಗಿ ಯಾರೂ ಮನೆಯಿಂದ ಹೊರಬರಬಾರದು. ಸಾರ್ವಜನಿಕ ಸ್ಥಳಲ್ಲಿ ಅಂತರ ಪಾಲಿಸಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಜಿಲ್ಲೆಯ ಜನರು ಜಾಗರೂಕರಾಗಿದ್ದರೆ ಆತಂಕ ಪಡುವ ಅಗತ್ಯವಿಲ್ಲ. ಜಿಲ್ಲಾಡಳಿತ ಸೂಚನೆಗಳನ್ನು ಪಾಲಿಸಿದರೆ ಸಾಕು ಎಂದು ಸಲಹೆ ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು