ಶಿವಮೊಗ್ಗ: ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಯಾರ ಪರ ಯಾರು ಬೇಕಾದರೂ ಪ್ರಚಾರ ಮಾಡಬಹುದು. ಅವರ ಕರ್ತವ್ಯ ಅವರು ಮಾಡುತ್ತಿದ್ದಾರೆ. ಅದಕ್ಕೆ ಪ್ರತಿಕ್ರಿಯೆ ನೀಡುವಂತಹದ್ದು ಏನೂ ಇಲ್ಲ ಎಂದು ಹೇಳಿದರು.

ಡಿ.ಕೆ.ಶಿವಕುಮಾರ್ ಬಗ್ಗೆ ದೇವೇಗೌಡರು ಮಾಡಿರುವ ಆರೋಪ 30- 35 ವರ್ಷಗಳ ಹಿಂದಿನ ಕಥೆ. ಅದಕ್ಕೆ ದಾಖಲೆ ಇದೆ ಎಂದು ಗೌಡರೇ ಹೇಳಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ರಾಜ್ಯದಲ್ಲಿ 28 ಕ್ಷೇತ್ರಗಳಲ್ಲೂ ಜೆಡಿಎಸ್-ಬಿಜೆಪಿ ಮೈತ್ರಿಕೂಟ ಗೆಲುವು ಸಾಧಿಸಲಿದೆ. ಬಿಜೆಪಿಯಲ್ಲಿ ಭಿನ್ನಮತದ ವಿಚಾರವನ್ನು ಆ ಪಕ್ಷದ ಹೈಕಮಾಂಡ್ ಬಗೆಹರಿಸುತ್ತಿದೆ ಎಂದು ಹೇಳಿದರು.

ಜೆಡಿಎಸ್ ಬಿಜೆಪಿ ಕಾರ್ಯಕರ್ತರು ಒಗ್ಗಟ್ಟಾಗಿ ಹೊಂದಾಣಿಕೆಯಿಂದ ಕೆಲಸ ಮಾಡುತ್ತಿದ್ದಾರೆ. ಶಿವಮೊಗ್ಗ ಕ್ಷೇತ್ರದಲ್ಲಿ ಉತ್ತಮ ಹೊಂದಾಣಿಕೆ ಇದೆ. ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಹೆಚ್ಚಿನ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.