ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೀರ್ಥಹಳ್ಳಿ | ಮಳೆ, ಗಾಳಿಗೆ ಧರೆಗುರುಳಿದ 314 ವಿದ್ಯುತ್ ಕಂಬಗಳು

Last Updated 10 ಆಗಸ್ಟ್ 2020, 9:29 IST
ಅಕ್ಷರ ಗಾತ್ರ

ಶಿವಮೊಗ್ಗ: ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮಳೆ, ಗಾಳಿಯಿಂದಾಗಿ 314 ವಿದ್ಯುತ್ ಕಂಬಗಳು ಉರುಳಿವೆ. ವಿದ್ಯುತ್ ಕಂಬಗಳಿಗೆ ಅಪಾಯ ತರುವ 940 ಅಕೇಶಿಯಾ ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ನೂತನ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಅರಣ್ಯ ಇಲಾಖೆ, ಮೆಸ್ಕಾಂ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಎರಡು ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸದರೆ ಗ್ರಾಮೀಣ ಜನರ ಸಮಸ್ಯೆ ಬಗೆಹರಿಸಲು ಸಾಧ್ಯ. ಈ ಎರಡು ಇಲಾಖೆಗಳ ನಡುವಿನ ಸಮನ್ವಯದ ಕೊರತೆ ಪರಿಣಾಮ ಹಲವು ಸಮಸ್ಯೆಗಳು ಉಂಟಾಗಿವೆ. ಮಲೆನಾಡು ಭಾಗದಲ್ಲಿ ವಿದ್ಯುತ್ ಕಂಬಗಳ ಸಮೀಪ ಅಕೇಶಿಯಾ ಮರಗಳನ್ನು ನೆಟ್ಟಿರುವುದರಿಂದ ಗಾಳಿಗೆ ಮರಗಳು ಬಿದ್ದು ವಿದ್ಯುತ್ ಕಂಬಗಳಿಗೆ ವ್ಯಾಪಕ ಹಾನಿಯುಂಟಾಗುತ್ತಿದೆ. ಅಂತಹ ಕಡೆಗಳಲ್ಲಿ ಮರಗಳನ್ನು ತಕ್ಷಣ ತೆರವುಗೊಳಿಸಲು ಅನುಮತಿ ನೀಡಬೇಕು ಎಂದರು.

ಅಕೇಶಿಯಾ ಮರ ಬಿದ್ದರೆ 10ರಿಂದ 15 ವಿದ್ಯುತ್ ಕಂಬಗಳಿಗೆ ಹಾನಿಯಾಗುತ್ತದೆ. ಅರಣ್ಯ ಇಲಾಖೆ ಅಂತಹ ಮರಗಳನ್ನು ಮೊದಲೇ ಗುರುತಿಸಿ, ತೆರವುಗೊಳಿಸಬೇಕು. ಇನ್ನು ಮುಂದೆ ಜಿಲ್ಲೆಯಲ್ಲಿ ಅಕೇಶಿಯಾ ಹಾಗೂ ನೀಲಗಿರಿ ಸಸಿಗಳನ್ನು ನೆಡಬಾರದು. ಅಕೇಶಿಯಾ ಮರಗಳ ತೆರವುಗೊಳಿಸಲು ಕೋರಿ ಮೆಸ್ಕಾಂ ಸಲ್ಲಿಸುವ ಪ್ರಸ್ತಾವದ ಮೇಲೆ ತಕ್ಷಣ ಕ್ರಮ ಕೈಗೊಳ್ಳಬೇಕು. ಮರಗಳನ್ನು ತೆರವುಗೊಳಿಸಲು ಅಗತ್ಯವಾದ ಕತ್ತರಿಸುವ ಯಂತ್ರಗಳನ್ನು ಖರೀದಿಸಲು ಕ್ರಮ ಕೈಗೊಳ್ಳಬೇಕು ಎಂದು ಸಲಹೆ ಮಾಡಿದರು.

ಅರಣ್ಯ ಪ್ರದೇಶದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಅಂತರ್ಜಲ ಹೆಚ್ಚಿಸುವ ಕಾಮಗಾರಿಗಳಿಗೆ ಅಡ್ಡಿ ಮಾಡುತ್ತಿರುವ ದೂರುಗಳು ಬರುತ್ತಿವೆ. ಅರಣ್ಯದ ಪ್ರಾಣಿ, ಪಕ್ಷಿಗಳಿಗೆ ಅನುಕೂಲಕರವಾಗಿರುವ ಇಂತಹ ಯೋಜನೆಗಳ ಜಾರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಅಡ್ಡಿಪಡಿಸಬಾರದು ಎಂದು ತಾಕೀತು ಮಾಡಿದರು.

ಶಾಸಕ ಅರಗ ಜ್ಞಾನೇಂದ್ರ, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಜಿ.ಅನುರಾಧಾ, ಶಿವಮೊಗ್ಗ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಂಕರ್, ಸಾಗರ ವಿಭಾಗದ ಉ‍ಪ ಅರಣ್ಯ ಸಂರಕ್ಷಣಾಧಿಕಾರಿ ಮೋಹನಕುಮಾರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT