ತೀರ್ಥಹಳ್ಳಿ: ‘ಗ್ರಾಮ, ತಾಲ್ಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆ ನಡೆಸದಿರುವುದು ಜನವಿರೋಧಿ ನಡೆಯಾಗಿದೆ’ ಎಂದು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಶ್ವಲ್ ಗೌಡ ಬೇಸರ ವ್ಯಕ್ತಪಡಿಸಿದ್ದಾರೆ.

‘ಸ್ಥಳೀಯ ಸಂಸ್ಥೆಗಳಲ್ಲಿ ಜನಪ್ರತಿನಿಧಿಗಳು ಇಲ್ಲದ ಕಾರಣ ಮುಕ್ತವಾಗಿ ಸಮಸ್ಯೆ ಪರಿಹರಿಸಲಾಗದ ಸ್ಥಿತಿ ನಿರ್ಮಾಣವಾಗಿದೆ. ಐದಾರು ವರ್ಷಗಳಿಂದ ಚುನಾವಣೆ ನಡೆಸದೆ ಗ್ರಾಮ ಆಡಳಿತವನ್ನು ಕಡೆಗಣಿಸಲಾಗಿದೆ. ಎಲ್ಲಾ ಪಕ್ಷದ ಕಾರ್ಯಕರ್ತರು ಕರಪತ್ರ ಹಂಚುವ ಏಜೆಂಟರಾಗಿದ್ದಾರೆ’ ಎಂದು ಪ್ರಕಟಣೆಯಲ್ಲಿ ದೂರಿದ್ದಾರೆ.

‘ಎರಡು, ಮೂರನೇ ಹಂತದ ನಾಯಕತ್ವ ಅಧಿಕಾರ ಸಿಗದೆ ರಾಜಕೀಯ ದಿಂದ ವಂಚಿತವಾಗುವ ಸ್ಥಿತಿ ನಿರ್ಮಾಣ ವಾಗಿದೆ. ಕುಟುಂಬ ರಾಜಕಾರಣ ವನ್ನು ಪೋಷಿಸಲು ಎಲ್ಲಾ ನಾಯಕರು ಸಜ್ಜಾದಂತಿದೆ. ಶಾಸಕರು, ಸಂಸದರಿಂದ ಕೆಲಸ ಮಾಡಿಸಿಕೊಳ್ಳಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಇದರಿಂದ ಬೃಹತ್ ಕಾಮಗಾರಿ ಹೊರತಾಗಿ ಗ್ರಾಮೀಣ ಭಾಗದ ಯಾವುದೇ ಕೆಲಸಗಳು ನಡೆಯುತ್ತಿಲ್ಲ’ ಎಂದು ಆರೋಪಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-42-263013259

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.