ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಧನ್ವ ಎನ್.ಎಸ್. ರಾಷ್ಟ್ರಮಟ್ಟಕ್ಕೆ ಆಯ್ಕೆ

Published 24 ಜನವರಿ 2024, 12:44 IST
Last Updated 24 ಜನವರಿ 2024, 12:44 IST
ಅಕ್ಷರ ಗಾತ್ರ

ತೀರ್ಥಹಳ್ಳಿ: ಅಂಗವಿಕಲರ 14 ರಿಂದ 17 ವರ್ಷದ ವಯೋಮಾನದ ಗುಂಡು ಎಸೆತ ಸ್ಪರ್ಧೆಯಲ್ಲಿ ಬಾವಿಕೈಸರು ಸರ್ಕಾರಿ ಪ್ರೌಢಶಾಲೆಯ ಸುಧನ್ವ‌ ಎನ್.ಎಸ್. ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಶಿವಮೊಗ್ಗದಲ್ಲಿ ನಡೆದ ಕ್ರೀಡಾಕೂಟದಲ್ಲಿ ಗುಂಡು ಎಸೆತ ಮತ್ತು ಜಾವಲಿನ್‌ ಥ್ರೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಇವರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದರು. ತುಮಕೂರು ಜಿಲ್ಲೆ ಮಧುಗಿರಿಯಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಗುಂಡು ಎಸೆತದಲ್ಲಿ 10.86 ಮೀಟರ್‌ ದೂರಕ್ಕೆ ಎಸೆಯುವ ಮೂಲಕ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸುಧನ್ವ ಸಂತೆಹಕ್ಲು ಸವಿತಾ ಕೆ.ಎಸ್.‌ ಮತ್ತು ನಾಗೇಂದ್ರ ಎಸ್.ಬಿ. ದಂಪತಿ ಪುತ್ರ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT