ತೀರ್ಥಹಳ್ಳಿ: ಸರ್ಕಾರದ ಅಧಿಕೃತ ಕ್ವಾರಿಗಳಿಂದ ಮರಳು ಅಕ್ರಮ ಸಾಗಣೆ ಮಾಡುತ್ತಿರುವ ಆರೋಪ ಕೇಳಿಬಂದ ಕಾರಣ ಶನಿವಾರ ಲೋಕಾಯುಕ್ತ ಅಧಿಕಾರಿಗಳ ತಂಡ ಇಲ್ಲಿನ ಮುಂಡುವಳ್ಳಿ, ಬೆಜ್ಜವಳ್ಳಿಯ ಮರಳು ಕ್ವಾರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ವಿವಿಧ ಇಲಾಖೆ, ಸಿಬ್ಬಂದಿಯ ಕರ್ತವ್ಯ ಲೋಪದ ಬಗ್ಗೆ ಶಾಸಕ ಆರಗ ಜ್ಞಾನೇಂದ್ರ ಸೇರಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿ ಬಂದಿದ್ದವು. ಜಿಲ್ಲಾ ಪಂಚಾಯಿತಿ ಕೆಡಿಪಿ ಸಭೆಯಲ್ಲಿಯೂ ತೀವ್ರ ಟೀಕೆ ವ್ಯಕ್ತವಾಗಿತ್ತು. ಮರಳು ಕ್ವಾರಿಯ ಪರವಾನಗಿ, ರಾಜಧನದ ವಿಚಾರದಲ್ಲಾದ ಅಕ್ರಮಗಳನ್ನು ಶಾಸಕರು ಬಯಲಿಗೆಳೆದಿದ್ದರು.

ಲೋಕಾಯುಕ್ತ ತಂಡದವರು ಸರ್ಕಾರವು ಕ್ವಾರಿಗೆ ನಿಗದಿಪಡಿಸಿದ ಪ್ರದೇಶ, ಸಂಗ್ರಹದ ಸ್ಥಳ, ನದಿ ಪ್ರದೇಶ ಪರಿಶೀಲಿಸಿ ಮಹತ್ವದ ಸಾಕ್ಷ್ಯ ಸಂಗ್ರಹಿಸಿದ್ದಾರೆ. ವಿವಿಧ ಇಲಾಖೆಯ ಅಧಿಕಾರಿಗಳ ಜೊತೆ ಚರ್ಚಿಸಿ ದಂಧೆಗೆ ಕಾರಣವಾದ ಅಂಶಗಳನ್ನು ಗುರುತಿಸಿದ್ದಾರೆ. ಪರವಾನಗಿ ಪಡೆದ ಪ್ರದೇಶದ ವಿಸ್ತೀರ್ಣದ ಬಗ್ಗೆ ಮಾಹಿತಿ ಪಡೆದು, ಸಮೀಪದ ಮಹಿಷಿ, ಮಂಡಗದ್ದೆ ಭಾಗದಲ್ಲಿ ಅನಧಿಕೃತವಾಗಿ ಮರಳು ಸಾಗಿಸಿರುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಸರ್ವೆ ನಡೆಸಿ ಸ್ಪಷ್ಟ ಮಾಹಿತಿ ನೀಡುವಂತೆ ಭೂ ಮಾಪನ ಇಲಾಖೆಗೆ ಸೂಚಿಸಿದ್ದಾರೆ. ಆಡಳಿತ ಶಾಮೀಲು ಸೇರಿ ಅಧಿಕಾರಿಗಳ ಪಾಲುದಾರಿಕೆಯ ಆರೋಪಗಳ ಬಗ್ಗೆ ಸ್ಪಷ್ಟೀಕರಣ ಕೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-42-1786173909

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.