ಶಿವಮೊಗ್ಗ | ಪಿಎಫ್‌ಐ ಹೆಸರಲ್ಲಿ ಜೀವ ಬೆದರಿಕೆ: ಬಂಧನ
ರಿಪ್ಪನ್‌ಪೇಟೆ (ಶಿವಮೊಗ್ಗ ಜಿಲ್ಲೆ): ಸಮೀಪದ ಕೆಂಚನಾಲ ಗ್ರಾಮದ ಯುವಕನೊಬ್ಬನಿಗೆ ನಿಷೇಧಿತ ಸಂಘಟನೆ ಪಿಎಫ್‌ಐ ಹೆಸರಲ್ಲಿ ಇನ್‌ಸ್ಟಾಗ್ರಾಂನಲ್ಲಿ ಜೀವ ಬೆದರಿಕೆ ಹಾಕಿದ್ದ ಆರೋಪಿಯನ್ನು ರಿಪ್ಪನ್‌ಪೇಟೆ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಆಚಾಪುರ ಗ್ರಾಮದ ಜಾವೇದ್ ಅಹಮದ್ ಎಂಬಾತ ಬಂಧಿತ.
ಕೆಂಚನಾಲ ಗ್ರಾಮದ ಯುವಕ ಸುಮಂತ್ ಅವರಿಗೆ ಜೀವ ಬೆದರಿಕೆ ಬಂದಿದ್ದು, ಠಾಣೆಗೆ ದೂರು ನೀಡಲಾಗಿತ್ತು. ಪೊಲೀಸರು ಆರೋಪಿಯನ್ನು ಬಂಧಿಸಿ ಕೋರ್ಟ್‌ಗೆ ಹಾಜರುಪಡಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.