ಬುಧವಾರ, ಅಕ್ಟೋಬರ್ 28, 2020
28 °C

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ಮೂವರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ರಿಪ್ಪನ್‌ಪೇಟೆ–ಕೋಣಂದೂರು ಮಾರ್ಗದ ಸುಣ್ಣದ ಬಸ್ತಿ ಬಳಿ ಗುರುವಾರ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 

ರಿಪ್ಪನ್‌ಪೇಟೆ ವಿನಾಯಕ ನಗರದ ರಾಘವೇಂದ್ರ ಭಟ್‌ (48), ಅವರ ಪುತ್ರ ಲೋಹಿತ್ (14), ಅತ್ತೆ ಅಂಬಿಕಾ (65) ಮೃತಪಟ್ಟವರು.

ಧರ್ಮಸ್ಥಳಕ್ಕೆ ಹೋಗಿ ವಾಪಸ್‌ ಬರುವಾಗ ಈ ಘಟನೆ ನಡೆದಿದೆ. ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಂತಿಗೆ ವಿದ್ಯುತ್ ಹರಿದು ಮೂವರಿಗೆ ತಗುಲಿದೆ. ಉಳಿದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು