ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಲಮಿತಿಯೊಳಗೆ ಆಸ್ತಿ ತೆರಿಗೆ ಪಾವತಿ: ಶೇ 5 ರಿಯಾಯಿತಿ

Published 28 ಮಾರ್ಚ್ 2024, 14:38 IST
Last Updated 28 ಮಾರ್ಚ್ 2024, 14:38 IST
ಅಕ್ಷರ ಗಾತ್ರ

ಸಾಗರ: ಏ.1ರಿಂದ 30ರೊಳಗೆ ಆಸ್ತಿ ತೆರಿಗೆ ಪಾವತಿಸಿದರೆ ಶೇ 5ರಷ್ಟು ರಿಯಾಯಿತಿ ಇರುತ್ತದೆ. ಮೇ ಮತ್ತು ಜೂನ್ ತಿಂಗಳೊಳಗೆ ಯಾವುದೇ ದಂಡವಿಲ್ಲದೆ ಆಸ್ತಿ ತೆರಿಗೆ ಪಾವತಿಸಬಹುದು. ನಗರವ್ಯಾಪ್ತಿಯ ಆಸ್ತಿ ಮಾಲೀಕರು ಸಕಾಲದಲ್ಲಿ ಕಂದಾಯ ಪಾವತಿಸುವ ಮೂಲಕ ಸಹಕರಿಸಬೇಕು ಎಂದು ನಗರಸಭೆ ಕಂದಾಯ ಅಧಿಕಾರಿ ಸಂತೋಷ್ ಕುಮಾರ್ ಮನವಿ ಮಾಡಿದ್ದಾರೆ.

ನೊಂದಣಿ ಮತ್ತು ಮುದ್ರಾಂಕ ಇಲಾಖೆಯು ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯದ ಪರಿಷ್ಕೃತ ದರಗಳನ್ನು 1-10-2023 ರಿಂದ ಜಾರಿಗೊಳಿಸಿದ್ದು 2023-24 ನೇ ಸಾಲಿನ ಮಾರುಕಟ್ಟೆ ಬೆಲೆಯನ್ನು 2024-25 ನೇ ಸಾಲಿನ ಆಸ್ತಿ ತೆರಿಗೆ ಲೆಕ್ಕಾಚಾರಕ್ಕೆ ಅನ್ವಯವಾಗುವಂತೆ ಆಸ್ತಿ ತೆರಿಗೆಯನ್ನು ತಂತ್ರಾಂಶದಲ್ಲಿ ಅಳವಡಿಸಿಕೊಂಡು ಪರಿಷ್ಕರಣೆ ಮಾಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT