ತೀರ್ಥಹಳ್ಳಿ: ಗುರುವಾರ ತಡರಾತ್ರಿ ಸುರಿದ ಆಲಿಕಲ್ಲು ಮಳೆ ಹಾಗೂ ಜೋರಾಗಿ ಬೀಸಿದ ಗಾಳಿಯಿಂದಾಗಿ ಸಮೀಪದ ಬೆಜ್ಜವಳ್ಳಿ, ತೂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಬಡಿ, ಕೂಡಿಗೆ ಗ್ರಾಮಗಳ ರೈತರ ತೋಟಗಳಲ್ಲಿನ 100ಕ್ಕೂ ಹೆಚ್ಚು ಅಡಿಕೆ ಮರಗಳು ಉರುಳಿ ಬಿದ್ದಿವೆ.

ಬೆಜ್ಜವಳ್ಳಿ ವಿದ್ಯುತ್ ಪೂರೈಕೆ ಉಪಕೇಂದ್ರ ಮಾರ್ಗದ ವಿದ್ಯುತ್ ಕಂಬಗಳ ಮೇಲೆ ಮರಗಳು ಉರುಳಿದ್ದು, ಅವು ತುಂಡಾಗಿವೆ. ಕನ್ನಂಗಿ ಸೇರಿದಂತೆ ಹಲವು ಭಾಗದಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದೆ.

ಗಾಳಿಯ ರಭಸಕ್ಕೆ ಅರಣ್ಯ ಪ್ರದೇಶದಲ್ಲಿ ಮರಗಳ ರೆಂಬೆಗಳು ಮುರಿದು ಬಿದ್ದಿವೆ. ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಯ ವಿವಿಧ ಮಾರ್ಗಗಳು ತರಗೆಲೆಗಳಿಂದ ಮುಚ್ಚಿಹೋಗಿದ್ದು ಕಂಡು ಬಂತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-42-776809896

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.