ಸೋಮವಾರ, ಅಕ್ಟೋಬರ್ 18, 2021
27 °C
ಚೇತರಿಕೆ ಕಾಣುತ್ತಿರುವ ಪ್ರವಾಸೋದ್ಯಮ

ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರ ದಂಡು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಾರ್ಗಲ್: ವಿಶ್ವ ವಿಖ್ಯಾತ ಜೋಗ ಜಲಪಾತದ ವೀಕ್ಷಣೆಗೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ಶನಿವಾರ ಒಂದೇ ದಿನ ಮೂರು ಸಾವಿರ ಪ್ರವಾಸಿಗರು ಜಲಪಾತ ವೀಕ್ಷಿಸಿದ್ದಾರೆ.

ಮಳೆಗಾಲದ ಬಿಡುವಿನ ನಡುವೆ ಪ್ರಕೃತಿಯ ಹಚ್ಚ ಹಸುರಿನ ಪಶ್ಚಿಮಘಟ್ಟಗಳ ನಡುವೆ ಶ್ವೇತ ವರ್ಣದಿಂದ ಶರಾವತಿ ಕಣಿವೆಯಾಳಕ್ಕೆ ಧುಮ್ಮಿಕ್ಕುತ್ತಿರುವ ಜಲಸಿರಿಯ ವೈಭವವನ್ನು ಪ್ರವಾಸಿಗರು ಕಣ್ತುಂಬಿಕೊಳ್ಳುತ್ತಿದ್ದಾರೆ.

ಕಠಿಣ ನಿಯಮಗಳಿಂದ ಪ್ರವಾಸಿಗರಿಗೆ ಹೇರಿದ್ದ ನಿರ್ಬಂಧ ಸಡಿಲಿಸಿದ ಕಾರಣ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ.

‘ಶನಿವಾರ ಮೂರು ಸಾವಿರ ಪ್ರವಾಸಿಗರು ಭೇಟಿ ನೀಡಿದ್ದು, ಪ್ರಾಧಿಕಾರಕ್ಕೆ ₹ 55 ಸಾವಿರ ಆದಾಯ ಸಂಗ್ರಹವಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಿಪ್‌ಲೈನ್ ಕಾರ್ಯಾರಂಭ ವಿಳಂಬ:

ಜಲಪಾತದ ಮುಂಭಾಗದಲ್ಲಿ ಸಾಹಸ ಪ್ರವಾಸೋದ್ಯಮವನ್ನು ಆಕರ್ಷಿಸುವ ನಿಟ್ಟಿನಲ್ಲಿ ₹ 88 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ್ದ ಜಿಪ್‌ಲೈನ್ ಸದ್ಯಕ್ಕೆ ಕಾರ್ಯಾರಂಭ ಮಾಡುವ ಲಕ್ಷಣಗಳು ಕಾಣುತ್ತಿಲ್ಲ. ತಾಂತ್ರಿಕ ಅಡಚಣೆಯಿಂದ ನಿಲುಗಡೆಯಾಗಿದ್ದ ಸಾಹಸ ಘಟಕ ನಿರ್ಮಾಣ ಕಾಮಗಾರಿಗೆ ಸದ್ಯ ವಿವಿಧ ಅಭಿವೃದ್ಧಿ ಕಾರ್ಯಗಳ ಕಾರಣ ಹಿನ್ನಡೆಯಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ನೈಸರ್ಗಿಕವಾದ ಅರಣ್ಯ ಸಂಪತ್ತನ್ನು ಉಳಿಸಿಕೊಂಡು ಜಲಪಾತದ ನೈಜ ಸೌಂದರ್ಯಕ್ಕೆ ಧಕ್ಕೆ ಬಾರದ ರೀತಿಯಲ್ಲಿ ಜೋಗದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವುದು ಪ್ರಾಧಿಕಾರಕ್ಕೆ ಸವಾಲಿನ ಕೆಲಸವಾಗಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.