ಶುಕ್ರವಾರ, ಜೂನ್ 25, 2021
29 °C

ಗಾಂಜಾ ಸಾಗಣೆ: ಆರೋಪಿಗಳ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತೀರ್ಥಹಳ್ಳಿ: ಗಾಂಜಾ ಸಾಗಿಸುತ್ತಿದ್ದ ಆರೋಪ ಸಂಬಂಧ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 6 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ದ್ವಿಚಕ್ರ ವಾಹನದಲ್ಲಿ ಗಾಂಜಾ ತುಂಬಿದ ಚೀಲವನ್ನು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಶುಕ್ರವಾರ ಪಟ್ಟಣದ ಬಾಳೇಬೈಲಿನಲ್ಲಿ ಪೊಲೀಸರು ಬೆನ್ನಟ್ಟಿ ಹಿಡಿದಿದ್ದಾರೆ. 

ಶೃಂಗೇರಿ ವಾಸಿ ಯೋಗಪ್ಪ, ತೀರ್ಥಹಳ್ಳಿ ತಾಲ್ಲೂಕಿನ ದಂಡಿನಕೊಡಿಗೆಯ ದೀಪಕ್ ಬಂಧಿತರು. ₹ 62,500 ಮೌಲ್ಯದ ಎರಡೂವರೆ ಕೆ.ಜಿ. ಗಾಂಜಾ, 1 ದ್ವಿಚಕ್ರ ವಾಹನ, 2 ಮೊಬೈಲ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ತೀರ್ಥಹಳ್ಳಿ ಡಿವೈಎಸ್‌ಪಿ ಸಂತೋಷ್ ಡಿಸಿಐಬಿ ವಿಭಾಗದ ಸಿಪಿಐ ಕುಮಾರಸ್ವಾಮಿ ನೇತೃತ್ವದಲ್ಲಿ ದಾಳಿ ನಡೆಯಿತು.

ಕಾರು ವಶ: ಶನಿವಾರ ಬೆಳಿಗ್ಗೆ ಇಟಿಯೋಸ್ ಕಾರಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ 4 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಾರು, 5 ಮೊಬೈಲ್, ₹ 6,600 ನಗದು, 1 ಕೆ.ಜಿ. ಗಾಂಜಾ ವಶಪಡಿಸಿಕೊಂಡಿದ್ದಾರೆ. ಭದ್ರಾವತಿಯ ಅರುಣ್, ರಂಜಿತ್, ಪ್ರದೀಪ್ ಯಾನೇ ಕಾಟು, ಕಿರಣ್ ಬಂಧಿತ ಆರೋಪಿಗಳು.

ತಹಶೀಲ್ದಾರ್ ಡಾ.ಎಸ್.ಬಿ. ಶ್ರೀಪಾದ್ ಮಹಜರ್ ಪ್ರಕ್ರಿಯೆ ನಡೆಸಿದರು. ಡಿವೈಎಸ್‌ಪಿ ಸಂತೋಷ್ ಮಾರ್ಗದರ್ಶನದಲ್ಲಿ ಸಿಪಿಐ ಪ್ರವೀಣ್ ನೀಲಮ್ಮನವರ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತು. ಸಿಬ್ಬಂದಿ ಎಸ್. ಜಗದೀಶ್, ಲೋಕೇಶ್ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು