ಶಿವಮೊಗ್ಗ: ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ರಾಜಕೀಯ ಪಕ್ಷಗಳು ಮತಗಟ್ಟೆ ಏಜೆಂಟರಿಗೆ ತಾಲ್ಲೂಕು ಹಂತದಲ್ಲಿ ತರಬೇತಿ ಆಯೋಜಿಸಿದರೆ ಜಿಲ್ಲಾಡಳಿತದಿಂದ ಸಹಕಾರ ನೀಡಲಾಗುವುದು ಎಂದು ಜಿಲ್ಲಾ ಮತದಾರರ ಪಟ್ಟಿ ವೀಕ್ಷಕ ಉಜ್ವಲ್ ಕುಮಾರ್ ಘೋಷ್ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆಯಲ್ಲಿ ಅವರು ಮಾತನಾಡಿದರು.

ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಹೊಸದಾಗಿ ಹೆಸರು ಸೇರ್ಪಡೆ ಮಾಡಿರುವವರ ಹೆಸರು ಮಾತ್ರವಲ್ಲದೆ, ತೆಗೆದು ಹಾಕಲಾಗಿರುವ ಹೆಸರುಗಳ ಪಟ್ಟಿಯನ್ನು ಸಹ ಪ್ರಕಟಿಸಲಾಗುತ್ತಿದೆ. ಈ ಪಟ್ಟಿಯನ್ನು ವೆಬ್ಸೈಟ್ನಲ್ಲಿ ಸಹ ಪ್ರಕಟಿಸಲು ಪ್ರಯತ್ನಿಸಲಾಗುವುದು. ಮತದಾರರ ಪಟ್ಟಿಯಿಂದ ಹೆಸರು ತೆಗೆಯುವ ಸಂದರ್ಭದಲ್ಲಿ ಜಾಗರೂಕತೆ ವಹಿಸಬೇಕು. ಮೃತಪಟ್ಟವರ ಹೆಸರನ್ನು ಪಟ್ಟಿಯಿಂದ ತೆಗೆದು ಹಾಕಬೇಕು. ಇದೇ ರೀತಿ ಮದುವೆಯಾಗಿ ಬೇರೆ ಕಡೆ ಹೋಗಿರುವವರು, ವಿಳಾಸ ಬದಲಾವಣೆ ಮಾಡಿರುವವರನ್ನು ಸರಿಯಾಗಿ ಪರಿಶೀಲಿಸಿ, ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಯುವ ಮತದಾರರ ಸೇರ್ಪಡೆಗೆ ಕ್ರಮ: ಮತದಾರರ ಪಟ್ಟಿಯಲ್ಲಿ ಯುವ ವಿದ್ಯಾರ್ಥಿ ಮತದಾರರನ್ನು ಸೇರ್ಪಡೆಗೊಳಿಸಲು ವ್ಯವಸ್ಥಿತ ಕ್ರಮ ಕೈಗೊಳ್ಳಬೇಕು. ಪ್ರತಿಯೊಂದು ಕಾಲೇಜಿನಲ್ಲಿ ಮತದಾರರ ಪಟ್ಟಿಯಲ್ಲಿ ನೋಂದಣಿ ಮಾಡುವ ಅರ್ಜಿ ಲಭ್ಯವಿದ್ದು, ಪ್ರತಿಯೊಬ್ಬರ ನೋಂದಣಿಯಾಗಿರುವುದನ್ನು ಖಾತ್ರಿಪಡಿಸಿಕೊಳ್ಳಬೇಕು ಎಂದರು.

ಮತದಾರರ ವಿವರ: ಜಿಲ್ಲೆಯ ಮತದಾರರ ಕರಡು ಪಟ್ಟಿಯನ್ನು ಈಗಾಗಲೇ ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳಿಗೆ ಕಳೆದ ಡಿ.17ರವರೆಗೆ ಸಮಯ ನಿಗದಿಪಡಿಸಲಾಗಿತ್ತು. ಜ.18ರಂದು ಮತದಾರರ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುತ್ತಿದೆ. ಕರಡು ಪಟ್ಟಿ ಪ್ರಕಾರ ಜಿಲ್ಲೆಯಲ್ಲಿ ಒಟ್ಟು 14,54,201 ಮತದಾರರು ಇದ್ದಾರೆ. ಇವರಲ್ಲಿ 7,22,144 ಪುರುಷ ಹಾಗೂ 7,32,057 ಮಹಿಳಾ ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್. ವೈಶಾಲಿ, ಹೆಚ್ಚುವರಿ ಜಿಲ್ಲಾಧಿಕಾರಿ ಜಿ. ಅನುರಾಧ, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಯೋಜನಾ ನಿರ್ದೇಶಕ ಡಾ. ನಾಗೇಂದ್ರಹೊನ್ನಳ್ಳಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.