ಭಾನುವಾರ, ಸೆಪ್ಟೆಂಬರ್ 20, 2020
21 °C

ಜೋಗ ಜಲಪಾತಕ್ಕೆ ಪ್ರವಾಸಿಗರ ದಂಡು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಾರ್ಗಲ್: ಶರಾವತಿ ಕೊಳ್ಳದಲ್ಲಿ ಸುರಿಯುತ್ತಿರುವ ಮಳೆಯಿಂದ ಜೋಗ ಜಲಪಾತ ಧುಮ್ಮಿಕ್ಕುತ್ತಿದ್ದು, ಜಲಪಾತದ ಸೌಂದರ್ಯ ಸವಿಯಲು ಶನಿವಾರ ಪ್ರವಾಸಿಗರ ದಂಡು ಲಗ್ಗೆಯಿಟ್ಟಿತ್ತು. 

ಕೊರೊನಾ ಕಾರಣ ಜಲಪಾತಕ್ಕೆ ‌ಪ್ರವಾಸಿಗರ ಪ್ರವೇಶಕ್ಕೆ ಹೇರಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದ್ದು, ಪ್ರವಾಸಿಗರು ಜಲಪಾತ ವೀಕ್ಷಣೆಗೆ ಬರುತ್ತಿದ್ದಾರೆ. 

ಸ್ವಾತಂತ್ರ್ಯೋತ್ಸವ ರಜೆ ಹಾಗೂ ಶನಿವಾರವಾದ ಕಾರಣ ಅತಿ ಹೆಚ್ಚು ಪ್ರವಾಸಿಗರು ಬಂದಿದ್ದರು. ಇದರಿಂದ ಪ್ರಾಧಿಕಾರದ ಪ್ರಧಾನ ದ್ವಾರದಲ್ಲಿ ಸ್ಯಾನಿಟೈಸರ್ ನೀಡಲು ಮತ್ತು ಥರ್ಮಲ್ ಸ್ಕ್ಯಾನಿಂಗ್ ಸಾಧ್ಯವಾಗದೇ ಪ್ರವಾಸಿಗರನ್ನು ವಾಹನ ಸಮೇತ ಒಳಗೆ ಬಿಡಲಾಯಿತು.

ಜೋಗದ ಗುಂಡಿ ಮಾರ್ಗಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಹೇರಿರುವುದಕ್ಕೆ ಹಲವು ಯುವಕ ಯುವತಿಯರು ಬೇಸರ ವ್ಯಕ್ತಪಡಿಸುತ್ತಿದ್ದುದು ಕಂಡುಬಂತು.

ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಿಂದ ಅತಿ ಹೆಚ್ಚು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಬಂದಿದ್ದರು ಪ್ರಾಧಿಕಾರದ ಸಿಬ್ಬಂದಿ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು