ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ತೀರ್ಥಹಳ್ಳಿ: ರಸ್ತೆಗೆ ಬೀಳುವ ಮರಗಳ ಕಟಾವು

Published 24 ಮೇ 2024, 13:37 IST
Last Updated 24 ಮೇ 2024, 13:37 IST
ಅಕ್ಷರ ಗಾತ್ರ

ತೀರ್ಥಹಳ್ಳಿ: ಮಳೆಗಾಲದಲ್ಲಿ ರಸ್ತೆಗೆ ಮರಗಳು ಬೀಳುವ ಹಿನ್ನೆಲೆಯಲ್ಲಿ ಗುಡ್ಡೇಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಸರ ಮಜರೆ ಗ್ರಾಮದಲ್ಲಿ 7 ಮರಗಳನ್ನು ಕಟಾವು ಮಾಡಲಾಗಿದೆ.

ಗ್ರಾಮ ಪಂಚಾಯಿತಿ ಮರ ಕಡಿತಲೆಗೆ ಅರ್ಜಿ ಸಲ್ಲಿಸಿದ್ದು, 7 ಮರಗಳ ಕಟಾವಿಗೆ ಆದೇಶ ನೀಡಲಾಗಿದೆ ಎಂದು ತೀರ್ಥಹಳ್ಳಿಯ ವಲಯ ಅರಣ್ಯಾಧಿಕಾರಿ ಲೋಕೇಶ್‌ ತಿಳಿಸಿದ್ದಾರೆ.

2023ರ ನವೆಂಬರ್‌ನಲ್ಲಿ ತೀರ್ಥಹಳ್ಳಿ-ಕೋಣಂದೂರು ಸಂಪರ್ಕದ ರಾಜ್ಯ ಹೆದ್ದಾರಿ ವಿಸ್ತರಣಾ ಕಾಮಗಾರಿ ಕೈಗೊಳ್ಳಲಾಗಿತ್ತು. ಕಾಮಗಾರಿಯ ವೇಳೆ ಅರಣ್ಯ ಇಲಾಖೆಯ ಕಾನೂನು ಅಡ್ಡಿಯಾಗಿದ್ದ ಹಿನ್ನೆಲೆಯಲ್ಲಿ ಮರ ಕಡಿತಲೆಗೆ ಅವಕಾಶ ನೀಡಿರಲಿಲ್ಲ.

ಈ ಕಾರಣ ಮರ ಕಡಿಯುವ ಬದಲು ಬೇರುಗಳನ್ನು ಸಡಿಲಿಸುವ ತಂತ್ರ ಅನುಸರಿಸಲಾಗಿದೆ ಎಂದು ‘ಪ್ರಜಾವಾಣಿ’ಯಲ್ಲಿ ಸುದ್ದಿ ಪ್ರಕಟವಾಗಿತ್ತು.

ಇದರಿಂದ ಎಚ್ಚೆತ್ತ ಅರಣ್ಯ ಇಲಾಖೆ ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿತ್ತು. ಈಗ ಮರಗಳನ್ನು ಕಟಾವು ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT