ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಂಗೆ ಭರ್ತಿ: 5 ಗೇಟ್ ಮೂಲಕ 16 ಸಾವಿರ ಕ್ಯುಸೆಕ್ ನೀರು ನದಿಗೆ ಬಿಡುಗಡೆ

Last Updated 4 ಜುಲೈ 2022, 2:49 IST
ಅಕ್ಷರ ಗಾತ್ರ

ಶಿವಮೊಗ್ಗ: ತುಂಗೆ ಮೈದುಂಬಿ ಹರಿಯುತ್ತಿರುವ ಕಾರಣ ನೀರಿನ ಒಳಹರಿವು ಪ್ರಮಾಣ ಹೆಚ್ಚಳವಾಗಿದ್ದು, ಗಾಜನೂರು ಜಲಾಶಯದಿಂದ 5 ಗೇಟ್ ಮೂಲಕ 16 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ.

ಮೂರ್ನಾಲ್ಕು ದಿನಗಳಿಂದ ಶೃಂಗೇರಿ, ಕಿಗ್ಗಾ ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಇದರಿಂದಾಗಿ ತುಂಗಾ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಈ ವರ್ಷದಲ್ಲಿ ಎರಡನೇ ಬಾರಿಗೆ ತುಂಗಾ ನದಿ ತುಂಬಿ ಹರಿಯುತ್ತಿದೆ.

ಶನಿವಾರ 6 ಗೇಟ್‌ಗಳ ಮೂಲಕ 19 ಸಾವಿರ ಕ್ಯುಸೆಕ್ ನೀರನ್ನು ಹೊರ ಬಿಡಲಾಗಿತ್ತು. ಭಾನುವಾರ ಬೆಳಿಗ್ಗೆ 5 ಗೇಟ್‌ಗಳ ಮೂಲಕ 16 ಸಾವಿರ ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಮಳೆ ಹೆಚ್ಚಾದರೆ ಇನ್ನಷ್ಟು ಪ್ರಮಾಣದ ನೀರು ನದಿಗೆ ಬಿಡುವ ಸಾಧ್ಯತೆ ಇದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ, ಬಿಸಿಲು ವಾತಾವರಣ ಇದ್ದು, ಆಗಾಗ್ಗೆ ಸುರಿಯುವ ತುಂತುರು ಮಳೆ ಮಲೆನಾಡನ್ನು ಹಸಿರಾಗಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT