ತೀರ್ಥಹಳ್ಳಿ: ಬಾಳೇಬೈಲು ಜನವಸತಿ ಪ್ರದೇಶದಲ್ಲಿ ಶೌಚಾಲಯದ ಮಲ, ಮೂತ್ರಗಳನ್ನು ನೇರವಾಗಿ ತುಂಗಾ ನದಿಗೆ ಬಿಡಲಾಗುತ್ತಿದೆ. ಅಂತಹ ನಿವಾಸಿಗಳಿಗೆ ಶೌಚಗುಂಡಿ ತೆರೆಸಲು ಸೂಚನೆ ನೀಡಬೇಕು ಎಂದು ಪಟ್ಟಣ ಪಂಚಾಯಿತಿ ಸದಸ್ಯ ರವೀಶ್ ಬಾಬಿ ಒತ್ತಾಯಿಸಿದರು.

ತುಂಗಾ ನದಿಯ ಸ್ವಚ್ಚತೆ ಕಾಪಾಡುವುದು ನಮ್ಮೆಲ್ಲರ ಹೊಣೆಯಾಗಬೇಕು. ಆದರೆ ಆಡಳಿತ ಇಂತಹ ವಿಚಾರಗಳ ಬಗ್ಗೆ ಗಮನಹರಿಸುತ್ತಿಲ್ಲ. ಶೌಚಾಲಯದ ತ್ಯಾಜ್ಯವನ್ನು ನದಿಗೆ ಹರಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷ ಟಿ.ರಹಮತ್ ಉಲ್ಲಾ ಅಸಾದಿ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಾಮಾನ್ಯ ಸಭೆಯಲ್ಲಿ ಸದಸ್ಯರು ಒಕ್ಕೊರಲಿನಿಂದ ಒತ್ತಾಯಿಸಿದರು.

ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಖಾಲಿ ನಿವೇಶನಗಳಿಗೆ ನಾಮಫಲಕ ಅಳವಡಿಸುವ ಬಗ್ಗೆ ಸಾಕಷ್ಟು ಬಾರಿ ಸಭೆ ನಿರ್ಣಯ ತೆಗೆದುಕೊಂಡಿದೆ. ಮುಂದಿನ ಸಭೆಯ ಒಳಗೆ ಕನಿಷ್ಟ 10 ನಿವೇಶನಗಳಿಗಾದರೂ ನಾಮಫಲಕ ಹಾಕಬೇಕು. ಆಸ್ತಿ ರಕ್ಷಣೆಯ ದೃಷ್ಟಿಯಿಂದ ಫಲಕ ಅಳವಡಿಕೆ ಮುಖ್ಯವಾಗಿದೆ ಎಂದು ಸದಸ್ಯ ಸೊಪ್ಪುಗುಡ್ಡೆ ರಾಘವೇಂದ್ರ ಹೇಳಿದರು.

ಕುಡಿಯುವ ನೀರು ಸರಬರಾಜು ಸ್ಥಗಿತಗೊಂಡ ಉದಾಹರಣೆಗಳು ಇಲ್ಲ. ಈ ವರ್ಷ ವಿದ್ಯುತ್ ವ್ಯತ್ಯಯದಿಂದ ನೀರು ಸರಬರಾಜಿನಲ್ಲಿ ವ್ಯತ್ಯಯವಾಗುತ್ತಿದೆ. ವಿದ್ಯುತ್ ಇಲ್ಲದಿದ್ದರೆ ಪರ್ಯಾಯವಾಗಿ ಜನರೇಟರ್ ವ್ಯವಸ್ಥೆ ಮಾಡಬೇಕು ಎಂದು ಸದಸ್ಯ ಸಂದೇಶ ಜವಳಿ ತಿಳಿಸಿದರು.

ಜಮಾ-ಖರ್ಚು ಲೆಕ್ಕಪತ್ರಗಳನ್ನು ಸದಸ್ಯರಿಗೆ ನೀಡಿದ ವರದಿಯಲ್ಲಿ ತಿಳಿಸಿಲ್ಲ. ಮುಂದಿನ ಸಭೆಯಲ್ಲಿ ಅವುಗಳ ಪಟ್ಟಿ ನೀಡಬೇಕು. ಮುಚ್ಚುಮರೆ ಮಾಡುವುದರಿಂದ ಮುಂದೆ ಸಮಸ್ಯೆಗಳು ಎದುರಾಗಬಹುದು ಎಂದು ನಾಮ ನಿರ್ದೇಶಿತ ಸದಸ್ಯ ಬಿ.ಆರ್.ರಾಘವೇಂದ್ರ ಶೆಟ್ಟಿ ಹೇಳಿದರು.

ಉಪಾಧ್ಯಕ್ಷೆ ಗೀತಾ ರಮೇಶ್, ಮುಖ್ಯಾಧಿಕಾರಿ ಡಿ.ನಾಗರಾಜ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.