ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟರ್ಕಿ ಭೂಕಂಪ| ಕನ್ನಡಿಗರಿಗೆ ನೆರವಾಗಲು ನೋಡಲ್ ಅಧಿಕಾರಿ ನೇಮಕ: ಸಿಎಂ ಬೊಮ್ಮಾಯಿ

Last Updated 8 ಫೆಬ್ರುವರಿ 2023, 10:27 IST
ಅಕ್ಷರ ಗಾತ್ರ

ಶಿವಮೊಗ್ಗ: ಟರ್ಕಿ ಹಾಗೂ ಸಿರಿಯಾದಲ್ಲಿನ ಭೂಕಂಪದ ಅವಘಡದಲ್ಲಿ ಸಿಲುಕಿರುವ ಕನ್ನಡಿಗರಿಗೆ ನೆರವಾಗಲು ಸರ್ಕಾರ ಮುಂದಾಗಿದೆ. ದೆಹಲಿಯ ಕರ್ನಾಟಕ ಭವನದ ಆಯುಕ್ತರನ್ನು ನೋಡಲ್ ಅಧಿಕಾರಿ ಆಗಿ ನೇಮಕ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಭೂಕಂಪದಲ್ಲಿ ಸಿಲುಕಿ ಸಂತ್ರಸ್ತರಾದ ಕನ್ನಡಿಗರ ಮಾಹಿತಿ ಇನ್ನೂ ಸಿಕ್ಕಿಲ್ಲ. ಆಯಾ ರಾಯಭಾರ ಕಚೇರಿಗಳೊಂದಿಗೆ ಸಂಪರ್ಕಿಸಿ ತೊಂದರೆಗೀಡಾದವರ ವಿವರ ಸಂಗ್ರಹಿಸುವಂತೆ ಸೂಚಿಸಿದ್ದೇನೆ ಎಂದರು.

ಅಗತ್ಯಬಿದ್ದಲ್ಲಿ ಸಂತ್ರಸ್ತರು ಇಚ್ಛಿಸಿದಲ್ಲಿ ರಾಜ್ಯಕ್ಕೆ ವಾಪಸ್ ಕರೆತರಲು ವ್ಯವಸ್ಥೆ ಮಾಡಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT