ಶಿವಮೊಗ್ಗ: ಇಲ್ಲಿನ ಮೆಗ್ಗಾನ್ ಆಸ್ಪತ್ರೆಯ ನರ್ಸಿಂಗ್ ಅಧಿಕಾರಿ ಹೇಮಾ (45) ಡೆಂಗಿ ಜ್ವರದಿಂದ ಮಂಗಳವಾರ ಸಂಜೆ ಮೃತಪಟ್ಟದ್ದಾರೆ.

ಜಿಲ್ಲೆಯ ಭದ್ರಾವತಿ ಮೂಲದ ಹೇಮಾ, ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ಕೆಲವು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದು, ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೇಮಾ ಅವರು ಡೆಂಗಿ ಜೊತೆಗೆ ಉಸಿರಾಟದ ತೊಂದರೆಯಿಂದಲೂ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.

ಇಲಿ ಜ್ವರ; ಯುವತಿ ಸಾವು:

ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಗ್ರಾಮವೊಂದರ ಯುವತಿಯೊಬ್ಬರು ಇಲಿ ಜ್ವರದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ಮೃತಪಟ್ಟಿದ್ದಾರೆ.

ಸಂಕ್ಲಾಪುರ ಗ್ರಾಮದ ರಮೇಶಪ್ಪ ಭದ್ರಾಪುರ ಅವರ ಪುತ್ರಿ ಆರ್.ಪಲ್ಲವಿ (21) ಮೃತ ಯುವತಿ. ಶಿವಮೊಗ್ಗದ ಕಮಲಾ ನೆಹರೂ ಕಾಲೇಜಿನಲ್ಲಿ ಬಿ.ಎ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಇವರು ಕಳೆದ 10 ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಅವರನ್ನು ಮಂಗಳೂರಿಗೆ ಕರೆದೊಯ್ಯಲಾಗಿತ್ತು ಎಂದು ಮೂಲಗಳು ತಿಳಿಸಿವೆ.

ಪಲ್ಲವಿ ಅವರ ವೈದ್ಯಕೀಯ ದಾಖಲೆಗಳನ್ನು ತರಿಸಿಕೊಂಡು ಇಲಿ ಜ್ವರದಿಂದ ಸಾವಿಗೀಡಾಗಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಶಿಕಾರಿಪುರ ತಾಲ್ಲೂಕು ಆರೋಗ್ಯಾಧಿಕಾರಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಟರಾಜ್ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.