ಬುಧವಾರ, ಮೇ 25, 2022
28 °C

ಶಿವಮೊಗ್ಗ: ಮಾಚೇನಹಳ್ಳಿ ಬಳಿ ಲಾರಿ ಮತ್ತು ಕಾರಿನ ಮಧ್ಯೆ ಅಪಘಾತ, ಇಬ್ಬರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಮಾಚೇನಹಳ್ಳಿ ಬಳಿ ಗುರುವಾರ ಲಾರಿ ಮತ್ತು ಕಾರಿನ ಮಧ್ಯೆ ನಡೆದ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಭದ್ರಾವತಿ ನ್ಯೂಟನ್ ನ ಷಣ್ಮುಖ, ರಾಮಚಂದ್ರ ಮೃತಪಟ್ಟವರು. 

ಮೃತರು ಕಾರಿನಲ್ಲಿ ಭದ್ರಾವತಿಯಿಂದ ತೀರ್ಥಹಳ್ಳಿಗೆ ಹೊರಟಿದ್ದರು. ಲಾರಿ ಶಿವಮೊಗ್ಗದಿಂದ ಭದ್ರಾವತಿ ಕಡೆ ಸಾಗುತ್ತಿತ್ತು. ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕ ದಾಟಿ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 

ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು