ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ | ಅಪರಿಚಿತ ವಾಹನ ಡಿಕ್ಕಿ: ಚಿರತೆ ಸಾವು

Published 6 ಫೆಬ್ರುವರಿ 2024, 16:30 IST
Last Updated 6 ಫೆಬ್ರುವರಿ 2024, 16:30 IST
ಅಕ್ಷರ ಗಾತ್ರ

ಶಿವಮೊಗ್ಗ: ತಾಲ್ಲೂಕಿನ ಆಯನೂರು ಸಮೀಪದ ಕಲ್ಲುಕುರ್ಚಿ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಚಿರತೆ ಮೃತಪಟ್ಟಿದೆ.

ಆಯನೂರು–ಹಣಗೆರೆಕಟ್ಟೆ-ತೀರ್ಥಹಳ್ಳಿ ಮಾರ್ಗದಲ್ಲಿ ಸೋಮವಾರ ರಾತ್ರಿ ಘಟನೆ ನಡೆದಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.

ರಸ್ತೆ ದಾಟಲು ಪ್ರಯತ್ನಿಸಿರುವ ಚಿರತೆಗೆ ವಾಹನ ಮುಖಕ್ಕೆ ಅಪ್ಪಳಿಸಿದೆ. ಇದರಿಂದ ಚಿರತೆ ಮುಖ ಸಂಪೂರ್ಣ ನಜ್ಜುಗುಜ್ಜಾಗಿ ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದೆ. ಅದು ಒಂದೂವರೆ ವರ್ಷ ಪ್ರಾಯದ ಗಂಡು ಚಿರತೆ ಎಂದು ತಿಳಿದುಬಂದಿದೆ.

ಸುದ್ದಿ ತಿಳಿದು ಹಣಗೆರೆಕಟ್ಟೆ ವಲಯ ಅರಣ್ಯಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶೆಟ್ಟಿಹಳ್ಳಿ ವನ್ಯಜೀವಿ ವಿಭಾಗದ ಡಿಎಫ್‌ಒ ಪ್ರಸನ್ನಕೃಷ್ಣ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT