ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ಗೃಹ ಸಚಿವರ ಭೇಟಿ: ಸ್ಥಳ ಪರಿಶೀಲಿಸಿದ ಸಂಸದ ರಾಘವೇಂದ್ರ

Last Updated 9 ಜನವರಿ 2021, 14:13 IST
ಅಕ್ಷರ ಗಾತ್ರ

ಭದ್ರಾವತಿ: ನಗರದ ಹೊರವಲಯದ ಮಿಲ್ಟ್ರಿಕ್ಯಾಂಪ್ ಬಳಿ ಮೀಸಲಿಟ್ಟಿರುವ ಕ್ಷೀಪ್ರ ಕಾರ್ಯಪಡೆ (ಆರ್‌ಎಎಫ್) ದಕ್ಷಿಣ ಭಾರತ ಬೆಟಾಲಿಯನ್ ಕಟ್ಟಡ ಶಂಕುಸ್ಥಾಪನೆ ಸಮಾರಂಭಕ್ಕೆ ಜ.17 ರಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಬರುತ್ತಿರುವ ಕಾರಣ ಸಂಸದ ಬಿ.ವೈ. ರಾಘವೇಂದ್ರ ಶನಿವಾರ ಸ್ಥಳ ಪರಿಶೀಲನೆ ನಡೆಸಿದರು.

ಶಂಕುಸ್ಥಾಪನಾ ಸ್ಥಳ ಹಾಗೂ ಹೆಲಿಪ್ಯಾಡ್ ಸ್ಥಳಕ್ಕೆ ಭೇಟಿ ನೀಡಿದ ಅವರು, ಇದಕ್ಕಾಗಿ ರೂಪಿಸಿರುವ ರಸ್ತೆನಕ್ಷೆಯ ಚಿತ್ರ ವೀಕ್ಷಿಸಿ ಮಾಹಿತಿ ಪಡೆದರು.

ಬೆಂಗಳೂರಿನಿಂದ ಹೆಲಿಕ್ಯಾಪ್ಟರ್ ಮೂಲಕ ಬರುವ ಅಮಿತ್‌ ಶಾ ಹೆಲಿಪ್ಯಾಡ್ ಸ್ಥಳಕ್ಕೆ ಕೂಡುವ ಬೈಪಾಸ್ ರಸ್ತೆ ಮೂಲಕ ಸಮಾರಂಭ ಸ್ಥಳಕ್ಕೆ ಬರಲಿದ್ದಾರೆ. ಅಲ್ಲಿನ ಸುತ್ತಲಿನ ರಕ್ಷಣಾ ವ್ಯವಸ್ಥೆ, ವೇದಿಕೆ ಕಾರ್ಯಕ್ರಮದ ಮಾಹಿತಿ ಪಡೆದ ರಾಘವೇಂದ್ರ ವ್ಯವಸ್ಥಿತವಾಗಿ ಕಾರ್ಯಕ್ರಮ ಆಯೋಜಿಸುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು.

ಇದೇ ವೇಳೆ ಆರ್‌ಎಎಫ್ ಅಧಿಕಾರಿಗಳು ನಡೆಸಿರುವ ಸಿದ್ಧತೆ ಕುರಿತು ಮಾಹಿತಿ ನೀಡಿದರು. ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಪೌರಾಯುಕ್ತ ಮನೋಹರ್, ಸೂಡಾ ಅಧ್ಯಕ್ಷ ಜ್ಯೋತಿಪ್ರಕಾಶ್, ದತ್ತಾತ್ರಿ, ಸಿಂಡಿಕೇಟ್ ಸದಸ್ಯ ಸಂತೋಷ ಬೆಳ್ಳಿಕೆರೆ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಜಿ. ಧರ್ಮಪ್ರಸಾದ್, ಬಿ.ಕೆ. ಶ್ರೀನಾಥ್, ಪ್ರಭಾಕರ, ಮಂಗೋಟೆ ರುದ್ರೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT