ಮಂಗಳವಾರ, ಜನವರಿ 18, 2022
27 °C

ಶಿವಮೊಗ್ಗ | ಅನಗತ್ಯ ಓಡಾಟ: ಪೊಲೀಸರಿಂದ ದಂಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿಕಾರಿಪುರ: ವಾರಾಂತ್ಯ ಕರ್ಫ್ಯೂ ಇದ್ದರೂ ಅನಗತ್ಯವಾಗಿ ಸಂಚರಿಸುತ್ತಿದ್ದ ವಾಹನ ಸವಾರರಿಗೆ ಬಾನುವಾರ ಪೊಲೀಸರು ದಂಡ ವಿಧಿಸಿ ಬಿಸಿ ಮುಟ್ಟಿಸಿದರು.

ವಾರಾಂತ್ಯವ ಕರ್ಫ್ಯೂ ಕಾರಣ ಪಟ್ಟಣದಲ್ಲಿ ಅಗತ್ಯ ವಸ್ತುಗಳ ಮಳಿಗೆಗಳನ್ನು ಹೊರತು ಪಡಿಸಿ ಎಲ್ಲ ಅಂಗಡಿಗಳು ಬಂದ್ ಆಗಿದ್ದವು. ಹೋಟೆಲ್‌ಗಳಲ್ಲಿ ಗ್ರಾಹಕರಿಗೆ ಪಾರ್ಸೆಲ್ ನೀಡಲಾಯಿತು.

ಬಸ್ ನಿಲ್ದಾಣ ಹಾಗೂ ಪ್ರಮುಖ ರಸ್ತೆಗಳು ಜನರಿಲ್ಲದೇ ಬಿಕೊ ಎನ್ನುತ್ತಿದ್ದವು. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರು ಮಾಸ್ಕ್ ಹಾಕದ ಹಾಗೂ ಸಮರ್ಪಕ ದಾಖಲೆ ಇಲ್ಲದ ವಾಹನಗಳ ಸವಾರರಿಗೆ ದಂಡ ವಿಧಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.