ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕಾರಿಪುರ: ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ

Published 1 ಜೂನ್ 2024, 15:27 IST
Last Updated 1 ಜೂನ್ 2024, 15:27 IST
ಅಕ್ಷರ ಗಾತ್ರ

ಶಿಕಾರಿಪುರ: ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಯುವ ಮೋರ್ಚಾ ತಾಲ್ಲೂಕು ಘಟಕದ ಪದಾಧಿಕಾರಿಗಳು ಶನಿವಾರ ಖಾಸಗಿ ಬಸ್ ನಿಲ್ದಾಣದ ಸಮೀಪ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ತಾಲ್ಲೂಕು ಘಟಕದ ಅಧ್ಯಕ್ಷ ವೀರನಗೌಡ, ‘ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರದ ಕಾರಣ ಅಧಿಕಾರಿ ಚಂದ್ರಶೇಖರ್ ಅವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದು ದುರಂತದ ಸಂಗತಿ. ಡೆತ್ ನೋಟ್ ಆಧಾರದಲ್ಲಿ ಅವ್ಯಹಾರದಲ್ಲಿ ಪಾಲ್ಗೊಂಡಿರುವ ಅಧಿಕಾರಿಗಳು ಹಾಗೂ ಸಚಿವ ನಾಗೇಂದ್ರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ನಿಷ್ಪಕ್ಷಪಾತ ತನಿಖೆ ನಡೆಸಬೇಕು’ ಎಂದು ಆಗ್ರಹಿಸಿದರು.

ಯುವ ಮೋರ್ಚಾ ಪದಾಧಿಕಾರಿಗಳಾದ ಪ್ರಶಾಂತ್ ಸಾಳಂಕೆ, ಲೋಹಿತನಾಯ್ಕ, ಬೆಣ್ಣೆ ಪ್ರವೀಣ್, ಹೂವಿನಮಂಡಿ ಸುರೇಶ್, ಅಗಡಿ ಆದಿತ್ಯ, ಪ್ರಸಾದ್‌, ಪೃಥ್ವಿಸಿಂಗ್, ನಾಗರಾಜ್, ಪ್ರವೀಣ್, ಅನೂಪ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT