ಶಿವಮೊಗ್ಗ: ರಾಜ್ಯ ಸರ್ಕಾರದ ಆಶ್ರಯ ಯೋಜನೆಗೆ ದಿವಂಗತ ಎಸ್.ಬಂಗಾರಪ್ಪ ವಸತಿ ಯೋಜನೆ ಎಂದು ಮರುನಾಮಕರಣ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಆರ್ಯ ಈಡಿಗರ ಸಂಘದಿಂದ ಶುಕ್ರವಾರ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಬಂಗಾರಪ್ಪನವರು ರಾಜ್ಯ ಕಂಡ ಧೀಮಂತ ಮುಖ್ಯಮಂತ್ರಿ. ಹಿಂದುಳಿದ ವರ್ಗಗಳ ಆಶಾಕಿರಣ ಆಗಿದ್ದವರು. ಆಶ್ರಯ, ಆರಾಧನಾ, ವಿಶ್ವ, ಗ್ರಾಮೀಣ ಕೃಪಾಂಕ, ರೈತರಿಗೆ ಉಚಿತ ವಿದ್ಯುತ್ ಹೀಗೆ ಹಲವು ಜನಪರ ಯೋಜನೆಗಳನ್ನು ರೂಪಿಸಿದ್ದರು.
ಬಂಗಾರಪ್ಪ ಬದುಕಿದ್ದರೆ ಅಕ್ಟೋಬರ್ 26ಕ್ಕೆ ಅವರಿಗೆ 90 ವರ್ಷ ತುಂಬುತ್ತಿತ್ತು. ಆಶ್ರಯ ಯೋಜನೆಗೆ ಅವರ ಹೆಸರು ಇಡುವ ಮೂಲಕ ಕರ್ನಾಟಕದ ಜನ–ಮಾನಸದಲ್ಲಿ ಅವರ ಹೆಸರು ಶಾಶ್ವತವಾಗಿ ಉಳಿಯುವಂತೆ ಮಾಡಬೇಕು ಎಂದು ಮನವಿಯಲ್ಲಿ ಕೋರಲಾಗಿದೆ.
ಈಡಿಗ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಆರ್. ಶ್ರೀಧರ್ ಹುಲ್ತಿಕೊಪ್ಪ, ಉದಯಕುಮಾರ್, ಕೆ.ಜಿ.ರಾಮಚಂದ್ರಪ್ಪ, ಪರಶುರಾಮಪ್ಪ, ಕೃಷ್ಣಮೂರ್ತಿ, ಕೃಷ್ಣಪ್ಪ, ರುದ್ರಪ್ಪ ಎ.ಬಿ.ರಘುಪತಿ, ಎಂ.ಬಿ.ರಾಜಪ್ಪ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.