ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿತ್ತನೆ ಬೀಜ ನಷ್ಟ ಅನುಭವಿಸಿರುವ ರೈತರಿಗೆ ಪರಿಹಾರ ವಿತರಿಸಲು ಒತ್ತಾಯ

Published 12 ಜುಲೈ 2023, 16:17 IST
Last Updated 12 ಜುಲೈ 2023, 16:17 IST
ಅಕ್ಷರ ಗಾತ್ರ

ಸಾಗರ: ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಜೂನ್ ತಿಂಗಳಲ್ಲಿ ಮಳೆ ಬಾರದ ಕಾರಣ ಬಿತ್ತನೆ ಬೀಜ ನಷ್ಟ ಅನುಭವಿಸಿರುವ ರೈತರಿಗೆ ಪರಿಹಾರ ಒದಗಿಸುವಂತೆ ಒತ್ತಾಯಿಸಿ ರೈತ ಸಂಘದ ಕಾರ್ಯಕರ್ತರು ಹಿರೇನೆಲ್ಲೂರು ಗ್ರಾಮ ಪಂಚಾಯಿತಿ ಎದುರು ಬುಧವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು. 

ಹಿರೇನೆಲ್ಲೂರು, ಸೈದೂರು, ಕಾನ್ಲೆ ಮೊದಲಾದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಸಕಾಲದಲ್ಲಿ ಮಳೆಯಾಗದೆ ಭತ್ತದ ಬೆಳೆಗಾರರು ಬಿತ್ತನೆ ಮಾಡಿದ ಬೀಜ ಫಸಲು ನೀಡದೆ ನಷ್ಟ ಅನುಭವಿಸುವಂತಾಗಿದೆ. ರೈತರಿಗೆ ಹೊಸದಾಗಿ ಬಿತ್ತನೆ ಬೀಜ ಖರೀದಿಸುವಷ್ಟು ಆರ್ಥಿಕ ಸಾಮರ್ಥ್ಯ ಇಲ್ಲವಾಗಿದೆ. ಸರ್ಕಾರ ಕೂಡಲೆ ರೈತರ ನೆರವಿಗೆ ಬರಬೇಕು ಎಂದು ರೈತ ಸಂಘದ ತಾಲ್ಲೂಕು ಅಧ್ಯಕ್ಷ ಮಂಜಪ್ಪ ಹಿರೇನೆಲ್ಲೂರು ಒತ್ತಾಯಿಸಿದರು.

ಮಲೆನಾಡು ಭಾಗದಲ್ಲಿ ಭತ್ತ ಬೆಳೆಯುವ ರೈತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತಿದೆ. ಹೆಚ್ಚಿನ ಬೆಳೆಗಾರರು ಭತ್ತ ಬೆಳೆಯುವುದರಿಂದ ವಿಮುಖರಾಗುತ್ತಿದ್ದಾರೆ. ಇಂತಹ ಸನ್ನಿವೇಶದಲ್ಲಿ ಭತ್ತ ಬೆಳೆಯುವ ರೈತರ ನೈತಿಕ ಸ್ಥೈರ್ಯ ಕಾಪಾಡುವುದು ಸರ್ಕಾರದ ಜವಾಬ್ಧಾರಿಯಾಗಿದೆ ಎಂದು ಅವರು ಹೇಳಿದರು.

ರೈತ ಸಂಘದ ಪ್ರಮುಖರಾದ ಕೆ.ಟಿ.ರಮೇಶ್ ಐಗಿನಬೈಲು, ಆಲಳ್ಳಿ ದೇವು, ಸುರೇಶ್, ರಾಜೇಶ್, ಮಂಜಪ್ಪ ಗುತ್ತನಹಳ್ಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT