ಶಿವಮೊಗ್ಗ: ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭಿವೃದ್ಧಿಗೆ ಮೀಸಲಾಗಿರುವ ಅನುದಾನವನ್ನು ಫೆಬ್ರುವರಿ ಅಂತ್ಯದೊಳಗೆ ಬಳಕೆ ಮಾಡಬೇಕು. ಇಲ್ಲವಾದರೆ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಎಚ್ಚರಿಕೆ ನೀಡಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪರಿಶಿಷ್ಟ ಜಾತಿ, ಪಂಗಡದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭಿವೃದ್ಧಿಗೆ ಮೀಸಲಿರುವ ಅನುದಾನವನ್ನು ನಿಗದಿತ ಅವಧಿಯೊಳಗೆ ಬಳಕೆ ಮಾಡದಿದ್ದರೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳೇ ನೇರ ಹೊಣೆ. ಅಂತಹ ಅಧಿಕಾರಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕಾಯ್ದೆಯಲ್ಲಿ ಅವಕಾಶವಿದೆ. ಯಾವುದೇ ಕಾರಣಕ್ಕೂ ಬಿಡುಗಡೆಯಾಗಿರುವ ಅನುದಾನ ಬಳಕೆಯಲ್ಲಿ ಲೋಪವಾಗಬಾರದು. ಇದುವರೆಗೆ ನಿಗದಿತ ಗುರಿಯನ್ನು ಸಾಧಿಸುವಲ್ಲಿ ವಿಫಲರಾಗಿರುವ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಬೇಕು ಎಂದು ಸೂಚನೆನೀಡಿದರು.

ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಕೂಡಲೇ ಪೂರ್ಣಗೊಳಿಸಬೇಕು. ಜನಪ್ರತಿನಿಧಿಗಳ ಅಧ್ಯಕ್ಷತೆಯಲ್ಲಿರುವ ಫಲಾನುಭವಿಗಳ ಆಯ್ಕೆ ಸಮಿತಿ ಸಭೆಯನ್ನು ಕರೆದು ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಕಲ್ಯಾಣಕ್ಕಾಗಿ ಜಾರಿಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳ ಬಗ್ಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅರಿವು ಮೂಡಿಸುವ ಕಾರ್ಯವನ್ನು ಮಾಡಬೇಕು ಎಂದುಹೇಳಿದರು.

ಶಾಸಕ ಕೆ.ಬಿ.ಅಶೋಕ ನಾಯ್ಕ್ ಮಾತನಾಡಿ, ‘ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಕುಡಿಯುವ ನೀರಿನ ಸೌಲಭ್ಯವನ್ನು ಕಲ್ಪಿಸಬೇಕಾಗಿದೆ. ಇದಕ್ಕಾಗಿ ಶಾಸಕರ ನಿಧಿಯನ್ನು ಬಳಕೆ ಮಾಡಿಕೊಳ್ಳಬಹುದು. ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳ ಆನ್‍ಲೈನ್ ಹಾಜರಾತಿಯನ್ನು ಖಾತ್ರಿಪಡಿಸಿಕೊಳ್ಳಬೇಕು’ ಎಂದರು.

ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್. ವೈಶಾಲಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಹೊನ್ನಳ್ಳಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ನಾಗರಾಜ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.