ಗುರುವಾರ, 29 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಾಳಕೊಪ್ಪ | ಸಬ್ಸಿಡಿ ಸೌಲಭ್ಯ ಪಡೆಯಿರಿ: ಸಂಸದ ಬಿ.ವೈ.ರಾಘವೇಂದ್ರ

Published 30 ನವೆಂಬರ್ 2023, 15:39 IST
Last Updated 30 ನವೆಂಬರ್ 2023, 15:39 IST
ಅಕ್ಷರ ಗಾತ್ರ

ಶಿರಾಳಕೊಪ್ಪ: ‘ಯುವಕ, ಯುವತಿಯರಿಗೆ ನೂರಾರು ಬಗೆಯ ಸಬ್ಸಿಡಿ ಯೋಜನೆಗಳನ್ನು ನರೇಂದ್ರ ಮೋದಿ ಅವರು ಜಾರಿಗೆ ತಂದಿದ್ದು, ಇದರ ಪ್ರಯೋಜನವನ್ನು ಗ್ರಾಮೀಣ ಪ್ರದೇಶದ ನಿರುದ್ಯೋಗಿಗಳು ಪಡೆಯಬೇಕು’ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಹತ್ತಿರದ ಸಿಡ್ಡಿಹಳ್ಳಿ ಗ್ರಾಮದಲ್ಲಿ ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣ ಘಟಕ ಯೋಜನೆ ಅಡಿಯಲ್ಲಿ ಸ್ಥಾಪಿಸಿರುವ ನೈಸರ್ಗಿಕ ಎಣ್ಣೆ ಗಾಣದ ಯಂತ್ರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಪ್ರಧಾನಿ ನರೇಂದ್ರ ಮೋದಿ ಅವರು ಮೆಕ್ ಇನ್ ಇಂಡಿಯಾಕ್ಕೆ ಒತ್ತು ನೀಡಿದ್ದಾರೆ. ಉದ್ಯಮಗಳನ್ನು ಆರಂಭಿಸಲು ರಸ್ತೆ, ರೈಲ್ವೆ, ವಿಮಾನ ನಿಲ್ದಾಣ ಸೇರಿದಂತೆ ಹಲವಾರು ಬಗೆಯ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಅವರ ಸಹಕಾರದಿಂದ ಶಿವಮೊಗ್ಗ, ಶಿಕಾರಿಪುರ, ರಾಣೆಬೆನ್ನೂರು ರೈಲು ಹಳಿಗಳ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ’ ಎಂದು ಹೇಳಿದರು.

‘ಹಿಂದೆ ಬ್ಯಾಂಕ್‌ಗಳಿಗೆ ಗ್ರಾಹಕರು ಬರಲು ಮೀನಮೇಷ ಎಣಿಸುತ್ತಿದ್ದರು. ಈಗ ಬ್ಯಾಂಕ್‌ಗಳು ಸರ್ಕಾರದ ಜೊತೆಗೆ ಕೈ ಜೋಡಿಸಿದ್ದು, ಅರ್ಹ ಫಲಾನುಭವಿಗಳಿಗೆ ಸಾಲ ಸೌಲಭ್ಯ ನೀಡುತ್ತಿವೆ’ ಎಂದು ಎಸ್‌ಬಿಐ ಬ್ಯಾಂಕ್‌ನ ಎಜಿಎಂ ವಿಜಯ ಸಾಹಿ ಹೇಳಿದರು.

ಅರಣ್ಯ ಅಭಿವೃದ್ಧಿ ನಿಗಮದ ಮಾಜಿ ಉಪಾಧ್ಯಕ್ಷ ಕೆ.ರೇವಣಪ್ಪ, ಡಿಸಿಸಿ ಬ್ಯಾಂಕ್ ನಿರ್ದೆಶಕ ಚನ್ನವೀರಪ್ಪ, ಅಗಡಿ ಅಶೋಕ, ಭೋವಿ ನಿಗಮದ ಮಾಜಿ ನಿರ್ದೇಶಕ ಸಣ್ಣ ಹನುಮಂತಪ್ಪ, ತೊಗರ್ಸಿ ಸೊಸೈಟಿ ನಿರ್ದೇಶಕ ಪರಶುರಾಮ, ಪುರಸಭೆ ಮಾಜಿ ಸದಸ್ಯ ಎ.ಸಿ.ಚನ್ನವೀರಪ್ಪ, ತೊಗರ್ಸಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪರಮೇಶಪ್ಪ, ಉಜ್ಜಪ್ಪ, ಸತ್ಯನಾರಾಯಣ ಹಾಗೂ ಯೋಗಿತಾ ಸಂಸ್ಥೆಯ ಪದಾಧಿಕಾರಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT