ಗುರುವಾರ , ಅಕ್ಟೋಬರ್ 29, 2020
21 °C

ಎಸ್‌ಟಿ ಮೀಸಲಾತಿ ಹೆಚ್ಚಳಕ್ಕೆ ವಾಲ್ಮೀಕಿ ಶ್ರೀ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ವಾಲ್ಮೀಕಿ ಸಮುದಾಯ ಒಳಗೊಂಡ ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣವನ್ನು ಶೇ 7.5ಕ್ಕೆ ಹೆಚ್ಚಿಸಲು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ರಾಜನಹಳ್ಳಿ  ವಾಲ್ಮೀಕಿ ಗುರು ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಆಗ್ರಹಿಸಿದರು.

ವಿದ್ಯಾನಗರ ಗಣಪತಿ ದೇವಸ್ಥಾನದ ಸಮುದಾಯ ಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವಿಶೇಷ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿ ಸುಮಾರು 50 ಲಕ್ಷಕ್ಕೂ ಹೆಚ್ಚು ವಾಲ್ಮೀಕಿ ಸಮುದಾಯದ ಜನರು ಇದ್ದಾರೆ. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ದೊರಕುತ್ತಿಲ್ಲ. ಈಗ ಕೇವಲ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ 3ರಷ್ಟು ಮೀಸಲಾತಿ  ಸಿಗುತ್ತಿದೆ. ಈ ಪ್ರಮಾಣ ಶೇ 7.5ಕ್ಕೆ ಹೆಚ್ಚಿಸಬೇಕು. ಜತೆಗೆ ಪರಿಶಿಷ್ಟ ಜಾತಿಯ ಶೇ 15ರಷ್ಟು ಮೀಸಲಾತಿ ಪ್ರಮಾಣವನ್ನು ಶೇ 17ಕ್ಕೆ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

ಮೀಸಲಾತಿ ಹೆಚ್ಚಳಕ್ಕೆ ಹೋರಾಟ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಿಸಲು ಸರ್ಕಾರ ವಿಳಂಬ ಮಾಡುತ್ತಿದೆ. ಹಾಗಾಗಿ, ಸರ್ಕಾರದ ವಿರುದ್ಧ ಹೋರಾಟ ಅನಿವಾರ್ಯ. ಈ ಸಂಬಂಧ ಅ.19ರವರೆಗೂ ರಾಜ್ಯದೆಲ್ಲೆಡೆ ಪ್ರವಾಸ ನಡೆಸಿ, ಜನಾಂಗದವರ ಜತೆ ಚರ್ಚಿಸಿ ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು.

20ಕ್ಕೆ ಮುಖಂಡರ ಸಭೆ: ಬೆಂಗಳೂರಿನಲ್ಲಿ ಅ.20ರಂದು ವಾಲ್ಮೀಕಿ ಸಮಾಜದ ಮುಖಂಡರ ಸಭೆ ಕರೆಯಲಾಗಿದೆ. 21ರಿಂದ 30ರವರೆಗೆ ಫ್ರೀಡಂ ಪಾರ್ಕ್‍ನಲ್ಲಿ ಧರಣಿ ಕುಳಿತುಕೊಳ್ಳಲಾಗುವುದು. 30 ರಂದು ಬೆಂಗಳೂರು ಚಲೋ ಕಾರ್ಯಕ್ರಮದ ಮೂಲಕ ಮುಖ್ಯಮಂತ್ರಿ ಗಮನಸೆಳೆಯಲಾಗುವುದು. ವಾಲ್ಮೀಕಿ ಜಯಂತಿ ದಿನ ಮುಖ್ಯಮಂತ್ರಿ ಆಹ್ವಾನಿಸಿ ಅಹವಾಲು ತಲುಪಿಸಲಾಗುವುದು ಎಂದರು.

ಜಿಲ್ಲಾ ನಾಯಕ ವಾಲ್ಮೀಕಿ ಸಮಾಜದ ಅಧ್ಯಕ್ಷ ಆರ್.ಲಕ್ಷ್ಮಣ್, ಕಾರ್ಯದರ್ಶಿ ಎಂ.ಆರ್.ಮೋಹನ್, ಕೋಶಾಧ್ಯಕ್ಷ ಕೆ.ಆರ್.ಸೀತಾರಾಮನಾಯಕ್, ಎಚ್.ಎಸ್.ಬಸವರಾಜಪ್ಪ, ಗಿರೀಶ್ ಉಪಸ್ಥಿತರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.