ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿಕಾರ ರಹಿತ ರಾಜಕಾರಣಕ್ಕೆ ಮೌಲ್ಯ

ಯುವಮೋರ್ಚಾ ಕಾರ್ಯಕಾರಿಣಿಯಲ್ಲಿ ಸಂಸದ ಬಿ.ವೈ. ರಾಘವೇಂದ್ರ
Last Updated 3 ಏಪ್ರಿಲ್ 2021, 16:40 IST
ಅಕ್ಷರ ಗಾತ್ರ

ಶಿವಮೊಗ್ಗ: ರಾಜಕಾರಣಿಗಳಿಗೆ ಸೇವಾ ಮನೋಭಾವ ಅಗತ್ಯ.ಸಮಾಜಕ್ಕಾಗಿ ಅಧಿಕಾರ ಹೊರತಾದ ಉತ್ತಮ ಕೆಲಸ ಮಾಡಿದರೆ ರಾಜಕಾರಣಕ್ಕೆ ಹೆಚ್ಚಿನ ಮೌಲ್ಯ ಸಿಗುತ್ತದೆ ಎಂದು ಸಂಸದ ಬಿ.ವೈ. ರಾಘವೇಂದ್ರ
ಪ್ರತಿಪಾದಿಸಿದರು.

ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲಾ ಯುವ ಮೋರ್ಚಾ ಕಾರ್ಯಾಕಾರಿಣಿ ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿನ ಯುವಮೋರ್ಚಾ ಭವಿಷ್ಯದ ಬಿಜೆಪಿ. ಪಕ್ಷ ಸಂಘಟನೆಗಾಗಿ ದುಡಿಯುವಂತಹ ಹಲವು ಮಹನೀಯರ ಮಾರ್ಗದರ್ಶನದಲ್ಲಿ ಯುವಮೋರ್ಚಾ ಕಾರ್ಯಕರ್ತರು ಕಾರ್ಯನಿರ್ವಹಿಸಬೇಕು. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಯುವ ಶಕ್ತಿಗಾಗಿ ಸಾಕಷ್ಟು ಯೋಜನೆಗಳನ್ನು ರೂಪಿಸಿದೆ. ದೇಶದ ಜನರಿಗೂ ಹಲವು ಹೊಸ ಯೋಜನೆಗಳನ್ನು ಜಾರಿ ಮಾಡಿದೆ. ಅವುಗಳನ್ನು ಜನಸಾಮಾನ್ಯರಿಗೆ ತಿಳಿಸುವ ಕಾರ್ಯ ಯುವಮೋರ್ಚಾ ಮಾಡಬೇಕು ಎಂದು ಸಲಹೆ ನೀಡಿದರು.

ಕೇಂದ್ರ, ರಾಜ್ಯದಲ್ಲಿ ಆಡಳಿತದಲ್ಲಿರುವ ಬಿಜೆಪಿ ಸರ್ಕಾರಗಳು ಜನರಿಗಾಗಿಯೇ ಹೊಸ ಹೊಸ ಯೋಜನೆಗಳನ್ನು ರೂಪಿಸುತ್ತಿವೆ. ಆ ಮೂಲಕ ಮತದಾರರ ಋಣ ತೀರಿಸುವ ಕಾರ್ಯ ಮಾಡುತ್ತಿವೆ ಎಂದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಡಿ.ಮೇಘರಾಜ್, ಯುವ ಮೋರ್ಚಾ ಮುಖಂಡರಾದ ಹೃಷಿಕೇಶ್ ಪೈ, ಹರಿಕೃಷ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT