ಗುರುವಾರ , ಜನವರಿ 27, 2022
27 °C

ವಾಹನ ಪಲ್ಟಿ: ಇಬ್ಬರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಳೆಹೊನ್ನೂರು: ಶಿವಮೊಗ್ಗ ತಾಲ್ಲೂಕಿನ ಗೋಂದಿಚಟ್ನಹಳ್ಳಿ ಬಳಿ ಅಡಿಕೆ ಕಾಯಿ ಚೀಲ ತುಂಬಿದ್ದ ಮಹೀಂದ್ರ ಪಿಕಪ್ ವಾಹನ ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಹೊನ್ನಾಳಿ ತಾಲ್ಲೂಕಿನ ಲಿಂಗಾಪುರದ ದಾನೇಶ್ (22) ಮತ್ತು ಹನುಮಂತ (25) ಮೃತಪಟ್ಟವರು. ಮತ್ತೊಬ್ಬ ಯುವಕ ಗಂಭೀರವಾಗಿ ಗಾಯಗೊಂಡಿದ್ದಾರೆ.

ಪಿಕಪ್ ವಾಹನದಲ್ಲಿ 6 ಜನರು ಇದ್ದರು. ಗೋಂದಿಚಟ್ನಹಳ್ಳಿಯ ಬಳಿ ಎದುರಿಗೆ ಬಂದ ಆಟೊ ತಪ್ಪಿಸಲು ಹೋಗಿ ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರೇಲರ್‌ಗೆ ಪಿಕಪ್‌ ಗುದ್ದಿ ಪಲ್ಟಿಯಾಗಿದೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.