ಸಾಗರ: ಮುಳುಗಡೆ ಸಂತ್ರಸ್ತರಿಗೆ, ಅರಣ್ಯ ಭೂಮಿ ಸಾಗುವಳಿದಾರರಿಗೆ ಭೂಮಿಯ ಹಕ್ಕುಪತ್ರ ನೀಡುವಂತೆ ಒತ್ತಾಯಿಸಿ ಇಲ್ಲಿನ ಉಪವಿಭಾಗಾಧಿಕಾರಿ ಕಚೇರಿ ಎದುರು ನಡೆಯತ್ತಿರುವ ಅನಿರ್ಧಿಷ್ಟಾವಧಿಯ ಧರಣಿ ಸತ್ಯಾಗ್ರಹ ಮಂಗಳವಾರ 9ನೇ ದಿನ ಪೂರೈಸಿದೆ.

ಎಚ್.ಗಣಪತಿಯಪ್ಪ ಸ್ಥಾಪಿತ ಶಿವಮೊಗ್ಗ ಜಿಲ್ಲಾ ರೈತ ಸಂಘ, ಮಲೆನಾಡು ರೈತರ ಹೋರಾಟ ಸಮಿತಿ, ಮುಳುಗಡೆ ಸಂತ್ರಸ್ತರ ಹಾಗೂ ಭೂ ಹಕ್ಕು ವಂಚಿತರ ಸಂಯುಕ್ತ ವೇದಿಕೆ ಆಶ್ರಯದಲ್ಲಿ ಆರಂಭಗೊಂಡಿರುವ ಈ ಹೋರಾಟ ಇನ್ನೂ ಮುಂದುವರೆದಿದೆ.

ಶರಾವತಿ ಸಂತ್ರಸ್ತರ ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಿಸಿದಂತೆ ವಿಶೇಷ ಕಾರ್ಯಪಡೆ ರಚಿಸುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿ ಪತ್ರ ಬರೆದಿದ್ದಾರೆ. ಈ ಶಿಫಾರಸಿನ ಅನ್ವಯ ವಿಶೇಷ ಕಾರ್ಯಪಡೆ ರಚನೆಯಾಗುವವರೆಗೂ ಹೋರಾಟವನ್ನು ನಿಲ್ಲಿಸುವುದಿಲ್ಲ ಎಂದು ಸತ್ಯಾಗ್ರಹಿಗಳು ಸ್ಪಷ್ಟಪಡಿಸಿದರು.

ದೆಹಲಿಯಲ್ಲಿ ರೈತರು ಈ ಹಿಂದೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದೀರ್ಘಾವಧಿ ಹೋರಾಟ ನಡೆಸಿದ ಮಾದರಿಯಲ್ಲೇ ಇಲ್ಲೂ ನಮ್ಮ ಸತ್ಯಾಗ್ರಹ ನಿರಂತರವಾಗಿ ನಡೆಯಲಿದೆ ಎಂದು ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ದಿನೇಶ್ ಶಿರವಾಳ ತಿಳಿಸಿದರು.

ಮಲೆನಾಡಿನ ರೈತರು ತಮ್ಮ ಭೂಮಿಯನ್ನು ಕಳೆದುಕೊಂಡು ತ್ಯಾಗ ಮಾಡದಿದ್ದರೆ ಲಿಂಗನಮಕ್ಕಿ ಅಣೆಕಟ್ಟು ನಿರ್ಮಾಣವಾಗುತ್ತಿರಲಿಲ್ಲ. ನಾಡಿಗೆ ಬೆಳಕು ನೀಡಲು ತಮ್ಮ ಬದುಕನ್ನು ಕತ್ತಲು ಮಾಡಿಕೊಂಡವರ ಬಗ್ಗೆ ಸರ್ಕಾರ ನಿರ್ಲಕ್ಷ್ಯ ಧೋರಣೆ ತಾಳುವುದು ಅಕ್ಷಮ್ಯ ಅಪರಾಧ ಎಂದು ರೈತ ಹೋರಾಟ ವೇದಿಕೆಯ ತೀ.ನ.ಶ್ರೀನಿವಾಸ್ ಹೇಳಿದರು.

ನಮ್ಮನ್ನು ಆಳುವ ಸರ್ಕಾರಗಳಿಗೆ ಇಚ್ಛಾಶಕ್ತಿ ಇದ್ದರೆ ಶರಾವತಿ ಸಂತ್ರಸ್ತರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದು ಕಷ್ಟದ ಕೆಲಸವಲ್ಲ. ಆದರೆ ಇದುವರೆಗೆ ಆಡಳಿತ ನಡೆಸಿರುವ ಎಲ್ಲಾ ಪಕ್ಷಗಳು ಸಂತ್ರಸ್ತರ ಕುರಿತು ಸಹಾನುಭೂತಿಯ ಹೇಳಿಕೆ ನೀಡುತ್ತಿವೆಯೇ ಹೊರತು ಪರಿಹಾರದ ಮಾರ್ಗ ಹುಡುಕುತ್ತಿಲ್ಲ ಎಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಿವಾನಂದ ಕುಗ್ವೆ ತಿಳಿಸಿದರು.

ಪ್ರಮುಖರಾದ ಎನ್.ಡಿ.ವಸಂತಕುಮಾರ್, ರಾಮಚಂದ್ರಪ್ಪ ಮನೆಘಟ್ಟ, ರಮೇಶ್ ಕೆಳದಿ, ಹೊಯ್ಸಳ ಗಣಪತಿಯಪ್ಪ, ಪರಮೇಶ್ವರ ದೂಗೂರು, ಜಿ.ಟಿ.ಸತ್ಯನಾರಾಯಣ, ಸುಂದರ್ ಸಿಂಗ್, ಪರಶುರಾಮ ಸಿದ್ದಿಹಳ್ಳಿ, ರಾಘವೇಂದ್ರ ಸಂಪಳ್ಳಿ, ರಾಜೇಶ್ ಬುಕ್ಕಿವರೆ, ಚಕ್ರಪಾಣಿ, ಇಂದ್ರಕುಮಾರ್, ಗಣೇಶ್ ತುಮರಿ, ವೀರಣ್ಣ ಗೌಡ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.