ಶುಕ್ರವಾರ, ಅಕ್ಟೋಬರ್ 7, 2022
28 °C
ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ವೈರಲ್

ಕಾಲೇಜು ಮುಂಭಾಗ ವಿದ್ಯಾರ್ಥಿಗಳ ತೂರಾಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಕಾಲೇಜು ಮುಂಭಾಗ ವಿದ್ಯಾರ್ಥಿಗಳು ಅಮಲಿನಲ್ಲಿ ತೂರಾಡುತ್ತ ಓಡಾಡುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಇಲ್ಲಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಗಳು ಕಾಲೇಜು ಗೇಟ್ ಮುಂದೆಯೇ ಅಮಲಿನಲ್ಲಿ ತೂರಾಡುತ್ತ ರಸ್ತೆ ಮೇಲೆ ಬಿದ್ದು ಹೊರಳಾಡುವ ವಿಡಿಯೊ ಇದಾಗಿದ್ದು, ವಿದ್ಯಾರ್ಥಿಗಳ ಮೊಬೈಲ್‌ನಲ್ಲೇ ವಿಡಿಯೊ ರೆಕಾರ್ಡ್ ಆಗಿದೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್, ‘ಘಟನೆಯ ಬಗ್ಗೆ ಪ್ರಾಥಮಿಕ ತನಿಖೆ ನಡೆಸಲಾಗಿದೆ. ವಿದ್ಯಾರ್ಥಿಗಳು ಜುಲೈ 22ರಂದು ಮಧ್ಯಾಹ್ನ ಸಾಗರ ರಸ್ತೆಯಲ್ಲಿರುವ ಬಾರ್‌ನಲ್ಲಿ ಮದ್ಯ ಸೇವಿಸಿ ಬಸ್ ಹತ್ತಲು ಕಾಲೇಜಿನ ಹತ್ತಿರ ಬಂದಾಗ ಕಾಲೇಜಿನ ಗೇಟ್‌ನಲ್ಲಿ ತಡೆಯಲಾಗಿತ್ತು. ಬಳಿಕ ಕಾಲೇಜು ಆಡಳಿತ ಮಂಡಳಿಯು ಪೋಷಕರಿಗೆ ಈ ವಿಚಾರ ತಿಳಿಸಿ, ಅವರೊಂದಿಗೆ ಸಮಾಲೋಚನೆ ನಡೆಸಿದೆ’ ಎಂದು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಕಾಲೇಜು ಕ್ಯಾಂಪಸ್‌ಗಳಲ್ಲಿ ಗಾಂಜಾ, ಡ್ರಗ್ಸ್ ಪೂರೈಕೆಯಾಗುತ್ತಿರುವ ಕುರಿತು ಮೊದಲಿನಿಂದಲೂ ಆತಂಕವಿತ್ತು. ಈ ವಿಡಿಯೊ ವೈರಲ್ ಆಗುತ್ತಿದ್ದಂತೆ ಮಾದಕ ವಸ್ತುಗಳು ವಿದ್ಯಾರ್ಥಿಗಳ ಕೈಸೇರುತ್ತಿರುವ ಕುರಿತು ಇದೀಗ ಗಂಭೀರ ಚರ್ಚೆ ಆರಂಭವಾಗಿದೆ.

 
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು