ಶಿವಮೊಗ್ಗ: ‘ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ನ ಮುಖ್ಯಸ್ಥ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣ ಮುಚ್ಚಿಹಾಕಲು ಎಸ್ಐಟಿ ರಚಿಸಲಾಗಿದೆ. ಎಸ್ಐಟಿ ಎಂದರೆ ಸ್ಪೆಷಲ್ ಇನ್ವೆಸ್ಟಿಗೇಷನ್ ಟೀಮ್ ಅಲ್ಲ. ಅದು ಸಿದ್ದರಾಮಯ್ಯ ಇನ್ವೆಸ್ಟಿಗೇಷನ್ ಟೀಮ್’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವ್ಯಂಗ್ಯವಾಡಿದರು.

‘ರಾಯ್ ಆತ್ಮಹತ್ಯೆ ಬಗ್ಗೆ ಅವರ ಕುಟುಂಬದವರೇ ದೂರು ಕೊಟ್ಟಿಲ್ಲ. ಆದರೆ ರಾಜ್ಯ ಸರ್ಕಾರ, ರಾಯ್ ಅವರ ಆಪ್ತ ಎಂದು ಹೇಳಲಾದ ಜಾನ್ ಎಂಬುವವರ ದೂರಿನ ಆಧಾರದ ಮೇಲೆ ತನಿಖೆಗೆ ಎಸ್ಐಟಿ ರಚಿಸಿದೆ. ಆ ಮೂಲಕ ಸತ್ಯ ಮುಚ್ಚಿಹಾಕಲು ಮುಂದಾಗಿದೆ’ ಎಂದು ಭಾನುವಾರ ಸುದ್ದಿಗಾರರ ಎದುರು ದೂರಿದರು.

‘ಆರ್ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಪ್ರಕರಣದ ತನಿಖೆಗೆ ಎಸ್ಐಟಿ ರಚಿಸಿ ರಾಜ್ಯ ಸರ್ಕಾರ ತನ್ನ ತಪ್ಪು ಮುಚ್ಚಿಹಾಕುವ ಪ್ರಯತ್ನ ನಡೆಸಿತ್ತು. ರಾಯ್ ಪ್ರಕರಣದಲ್ಲೂ ಅದೇ ಕೆಲಸಕ್ಕೆ ಮುಂದಾಗಿರಬಹುದೆಂಬ ಅನುಮಾನ ಕಾಡುತ್ತಿದೆ’ ಎಂದರು.
.ಸಿ.ಜೆ.ರಾಯ್ ಆತ್ಮಹತ್ಯೆ: ತನಿಖೆಗೆ ಎಸ್ಐಟಿ ರಚನೆ.

ಯಾವುದೋ ಸತ್ಯ ಮುಚ್ಚಿ ಹಾಕುವ ಉದ್ದೇಶದಿಂದ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಎಸ್ಐಟಿ ರಚಿಸಿದೆ. ಹಿಂದಿನಂತೆ ಈಗಲೂ ತನ್ನ ತಪ್ಪುಗಳನ್ನು ಮರೆಮಾಚಲು ಮುಂದಾಗಿದೆ.
– ವಿ.ಸುನಿಲ್ ಕುಮಾರ್, ಬಿಜೆಪಿ ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.