ಶಿವಮೊಗ್ಗ: ‘ಶಾಸಕ ಬಸನಗೌಡ ಪಾಟೀಲ ಯತ್ನಾಳ ನನ್ನ ವಿರುದ್ಧ ಪದೇಪದೇ ಸುಳ್ಳು ಆರೋಪ ಮಾಡುತ್ತಿದ್ದಾರೆ. ಅವರ ವಿರುದ್ಧ ₹ 1 ಇಲ್ಲವೇ ₹ 1 ಕೋಟಿ ಪರಿಹಾರ ಕೋರಿ ಮಾನನಷ್ಟ ಮೊಕದ್ದಮೆ ಹೂಡಲು ಚಿಂತನೆ ನಡೆಸಿದ್ದೇನೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

‘ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಹಾಗೂ ವಿಜಯೇಂದ್ರ ಡಿಸಿಎಂ ಆಗಲು ಯೋಜನೆ ನಡೆದಿದ್ದು, ಡಿ.ಕೆ.ಶಿವಕುಮಾರ್ ಅವರನ್ನು ಅಮಿತ್ ಶಾ ಬಳಿಗೆ ವಿಜಯೇಂದ್ರ ಕರೆದೊಯ್ದು ಚರ್ಚಿಸಿದ್ದಾರೆ ಎಂಬ ಯತ್ನಾಳ ಆರೋಪ ಕುರಿತ ಪ್ರಶ್ನೆಗೆ ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ಪ್ರತಿಕ್ರಿಯಿಸಿದರು.

‘ಯತ್ನಾಳ ಅವರಿಗೆ ನನ್ನ ಬಗ್ಗೆ ಮಾತನಾಡದಿದ್ದರೆ ಊಟ ಸೇರುವುದಿಲ್ಲ. ನನ್ನ ತಾಳ್ಮೆಗೂ ಮಿತಿ ಇದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.