ಸಾಗರ: ತಾಲ್ಲೂಕಿನ ಸಸರವಳ್ಳಿ– ಗಾಡಿಗೆರೆ ಗ್ರಾಮದ ಸಮೀಪ ಗಾಳಿ ಮಳೆಗೆ ವಿದ್ಯುತ್ ತಂತಿ ಹರಿದು ಮರ ಗಿಡಗಳ ಮೇಲೆ ಬಿದ್ದಿದೆ. ಇದರಿಂದಾಗಿ ವಿದ್ಯುತ್ ಪೂರೈಕೆಗೆ ತೊಂದರೆ ಉಂಟಾಗುತ್ತಿದ್ದು, ಮೆಸ್ಕಾಂ ಕ್ರಮ ಕೈಗೊಳ್ಳಬೇಕಿದೆ.
ಈ ಭಾಗದ ವಿದ್ಯುತ್ ತಂತಿ ಹಳೆಯದಾಗಿದ್ದು, ವಿದ್ಯುತ್ ಪರಿವರ್ತಕಗಳಿಗೂ ತೊಂದರೆ ಉಂಟಾಗುತ್ತಿದೆ. ಮರ– ಗಿಡಗಳ ಮೇಲೆ ವಿದ್ಯುತ್ ತಂತಿ ಬಿದ್ದಿರುವುದರಿಂದ ಅಪಾಯ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಹಳೆಯ ತಂತಿಗಳನ್ನು ತೆರವುಗೊಳಿಸಿ ಹೊಸ ತಂತಿಗಳನ್ನು ಅಳವಡಿಸಬೇಕು.