ಗುರುವಾರ , ಅಕ್ಟೋಬರ್ 29, 2020
26 °C

ಶಿವಮೊಗ್ಗ: ನಾಯಿಗಳಿಂದ ಜಿಂಕೆ ರಕ್ಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ನಾಯಿ ದಾಳಿಗೆ ಸಿಲುಕಿದ್ದ ಜಿಂಕೆಯನ್ನು ತೀರ್ಥಹಳ್ಳಿ ತಾಲ್ಲೂಕು ಬೆಜ್ಜುವಳ್ಳಿ ಪಂಚಾಯಿತಿ ವ್ಯಾಪ್ತಿಯ ಬೈನುಸರದ ಗ್ರಾಮಸ್ಥರು ಶುಕ್ರವಾರ ರಕ್ಷಿಸಿ ಸಮೀಪದ ಅರಣ್ಯಕ್ಕೆ ಬಿಟ್ಟಿದ್ದಾರೆ.

ಬೈನುಸರದ  ಪಾರ್ವತಿ ಅವರ ತೋಟಕ್ಕೆ ನುಗ್ಗಿದ ಜಿಂಕೆಯ ಮೇಲೆ ನಾಯಿಗಳು ದಾಳಿ ನಡೆಸಿದ್ದವು. ತಕ್ಷಣ ಸ್ಥಳದಲ್ಲೇ ಇದ್ದ ಗ್ರಾಮಸ್ಥರು ನಾಯಿಗಳನ್ನು ಚದುರಿಸಿ, ಚಿಂಕೆ ರಕ್ಷಿಸಿದ್ದಾರೆ. ಅರಣ್ಯ ಸಿಬ್ಬಂದಿ ಸಹಕಾರದಿಂದ ಚಿಕಿತ್ಸೆ ನೀಡಿದ ನಂತರ ಸಮೀಪದ ಅರಣ್ಯಕ್ಕೆ ಬಿಟ್ಟು ಬಂದಿದ್ದಾರೆ.

ಗ್ರಾಮಸ್ಥರಾದ ಚೈತನ್ಯ, ಸುಧಾಕರ ಶೆಟ್ಟಿ, ದಿವಾಕರ ಶೆಟ್ಟಿ, ಪಾರ್ವತಿ ಜಿಂಕೆ ರಕ್ಷಣೆ ಮಾಡಿದ್ದಾರೆ ಎಂದು ಅರಣ್ಯಾಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು