ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

COTPA ಕಾಯ್ದೆ ಉಲ್ಲಂಘನೆ: 20 ಪ್ರಕರಣ ದಾಖಲು

Published 29 ನವೆಂಬರ್ 2023, 13:14 IST
Last Updated 29 ನವೆಂಬರ್ 2023, 13:14 IST
ಅಕ್ಷರ ಗಾತ್ರ

ಭದ್ರಾವತಿ: ನಗರಸಭೆ ವಾರ್ಡ್ ನಂ. 22ರ ಉಜ್ಜನಿಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ತಾಲ್ಲೂಕು ಆರೋಗ್ಯ ಅಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಮಂಗಳವಾರ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿ ಕೋಟ್ಪಾ ಕಾಯ್ದೆ ಉಲ್ಲಂಘಿಸಿದವರಿಗೆ ದಂಡ ವಿಧಿಸಲಾಗಿದೆ.

20 ಪ್ರಕರಣ ದಾಖಲಿಸಲಾಗಿದೆ. ಸೆಕ್ಷನ್ 4ರಲ್ಲಿ 10, ‘6ಎ’ನಲ್ಲಿ 5 ಮತ್ತು ‘6ಬಿ‘ನಲ್ಲಿ 5 ಸೇರಿದಂತೆ ಒಟ್ಟು 20 ಪ್ರಕರಣಗಳಿಂದ ₹ 2,000 ದಂಡ ವಿಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ದಾಳಿಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ.ಅಶೋಕ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸುಶೀಲಾಬಾಯಿ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಆನಂದಮೂರ್ತಿ ಮತ್ತು ತಾಜ್ ಹಾಗೂ ಮನೋಹರ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿ.ಕೆ.ರವಿರಾಜ್ ಹಾಗೂ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು. ತಂಬಾಕು ಮಾರಾಟಗಾರರಿಗೆ ತಂಬಾಕು ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಿ ಜಾಗೃತಿ ಮೂಡಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT