ಮಂಗಳವಾರ, ಅಕ್ಟೋಬರ್ 26, 2021
23 °C
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ

ಶಿಕಾರಿಪುರ: ವಾಸ್ತುಶಿಲ್ಪಕ್ಕೆ ವಿಶ್ವಕರ್ಮರ ಕೊಡುಗೆ ಅಪಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿಕಾರಿಪುರ: ವಿಶ್ವಕರ್ಮ ಸಮಾಜದವರು ದೇಶದ ವಾಸ್ತುಶಿಲ್ಪಕ್ಕೆ ನೀಡಿದ ಕೊಡುಗೆ ಅಪಾರ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶ್ಲಾಘಿಸಿದರು.

ಪಟ್ಟಣದ ವಿನಾಯಕ ನಗರದಲ್ಲಿ ಶುಕ್ರವಾರ ವಿಶ್ವಕರ್ಮ ಸಮಾಜದಿಂದ ಆಯೋಜಿಸಿದ್ದ ಸಮುದಾಯ ಭವನದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

‘ವಿಶ್ವಕರ್ಮ ಸಮಾಜದವರು ಶ್ರಮಜೀವಿಗಳಾಗಿದ್ದು, ವಿವಿಧ ಕೌಶಲಗಳ ಮೂಲಕ ತಮ್ಮ ಜೀವನ ಸಾಗಿಸುವ ಜತೆಗೆ ನಾಡಿಗೆ ಕೊಡುಗೆ ನೀಡಿದ್ದಾರೆ. ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ತತ್ವದ ಅಡಿ ಎಲ್ಲಾ ಜನಾಂಗದ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ನೀಡಿದ್ದೇನೆ. ಕೊರೊನಾ ಸಂದರ್ಭದಲ್ಲಿ ಕುಶಲಕರ್ಮಿಗಳಿಗೆ ಸಹಾಯಧನ ವಿತರಿಸುವ ಜತೆ ಸಾಲ ಸೌಲಭ್ಯಗಳನ್ನು ನೀಡಿದ್ದೇನೆ. ಮುಂದಿನ ದಿನಗಳಲ್ಲೂ ಸರ್ಕಾರದಿಂದ ಸೌಲಭ್ಯವನ್ನು ಒದಗಿಸಲು ಗಮನ ಹರಿಸುತ್ತೇನೆ’ ಎಂದರು.

ಸಂಸದ ಬಿ.ವೈ. ರಾಘವೇಂದ್ರ, ‘ಆಧ್ಯಾತ್ಮಿಕ ಕ್ಷೇತ್ರದಲ್ಲಿ ಪ್ರಪಂಚಕ್ಕೆ ಭಾರತ ಉನ್ನತ ಕೊಡುಗೆ ನೀಡಿದೆ. ದೇಶದಲ್ಲಿ ವಿಶ್ವಕರ್ಮ ಸಮಾಜ ಬಿಜೆಪಿಗೆ ಬೆಂಬಲವಾಗಿ ನಿಂತಿದೆ. ವಿಶ್ವಕರ್ಮ ಸಮುದಾಯ ಭವನ ನಿರ್ಮಾಣಕ್ಕೆ ₹ 50 ಲಕ್ಷ ಅನುದಾನವನ್ನು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನೀಡಿದ್ದಾರೆ. ತಾಲ್ಲೂಕಿನ ಎಲ್ಲಾ ಸಮುದಾಯಗಳ ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ ನೀಡಿದ್ದಾರೆ’ ಎಂದು ಶ್ಲಾಘಿಸಿದರು.

‌‌ಬಿಜೆಪಿ ಮುಖಂಡ ಹಾಗೂ ಸಮುದಾಯ ಭವನ ನಿವೇಶನ ದಾನಿ ಭದ್ರಾಪುರದ ಹಾಲಪ್ಪ, ಬೆಳಗುತ್ತಿ ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಮಾತೃಶ್ರೀ ಸರಳಮ್ಮ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಬಿ. ಚನ್ನವೀರಪ್ಪ, ನಿರ್ದೇಶಕರಾದ ಬಿ.ಡಿ. ಭೂಕಾಂತ್, ಪುರಸಭೆ ಅಧ್ಯಕ್ಷೆ ಲಕ್ಷ್ಮೀ ಮಹಾಲಿಂಗಪ್ಪ, ಸದಸ್ಯರಾದ ಭದ್ರಾಪುರ ಫಾಲಾಕ್ಷ, ರೂಪಕಲಾ ಎಸ್. ಹೆಗಡೆ, ಜಿಲ್ಲಾ ವಿಶ್ವಕರ್ಮ ಮಹಾಸಭಾ ಅಧ್ಯಕ್ಷ ಅರಗದಳ್ಳಿ ನಿರಂಜನಮೂರ್ತಿ, ತಾಲ್ಲೂಕು ವಿಶ್ವಕರ್ಮ ಸಮಾಜದ ಅಧ್ಯಕ್ಷ ಮಲ್ಲಿಕಾರ್ಜುನ್ ಆಚಾರ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.