ಕೆರೆಕೋಡಿ (ಕೋಣಂದೂರು): ಊರಿಗೆ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಒದಗಿಸುವಲ್ಲಿ ನಿರ್ಲಕ್ಷ್ಯ ತೋರಿದ ಚುನಾಯಿತ ಪ್ರತಿನಿಧಿಗಳ ನಡೆಯನ್ನು ಖಂಡಿಸಿ ಕೆರೆಕೋಡಿ ಗ್ರಾಮಸ್ಥರು ಮುಂಬರುವ ಎಲ್ಲ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಲು ನಿರ್ಧರಿಸಿ ಮಂಗಳವಾರ ಊರಿನ ಮುಂಭಾಗದಲ್ಲಿ ಫ್ಲೆಕ್ಸ್ ಅಳವಡಿಸಿ ಪ್ರತಿಭಟನೆ ನಡೆಸಿದರು.
ಕೋಣಂದೂರು ಮುಖ್ಯರಸ್ತೆಯಿಂದ ಕೇವಲ 3 ಕಿ.ಮೀ. ದೂರದಲ್ಲಿರುವ ಕೆರೆಕೋಡಿ ಗ್ರಾಮದಲ್ಲಿ ಸುಮಾರು 35ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿವೆ. ಬಹುತೇಕರು ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದವರಾಗಿದ್ದಾರೆ.
‘ಕೂಲಿ, ಅಲ್ಪ ಸ್ವಲ್ಪ ಕೃಷಿ ಕಾಯಕದಲ್ಲಿ ತೊಡಗಿಸಿಕೊಂಡಿರುವ ನಮ್ಮ ಊರಿಗೆ ಸರ್ಕಾರದ ಸೌಲಭ್ಯಗಳು ಸಮರ್ಪಕವಾಗಿ ತಲುಪಿಲ್ಲ. ಮೂಲಸೌಕರ್ಯಗಳಾದ ರಸ್ತೆ, ಕುಡಿಯುವ ನೀರು, ಶೌಚಾಲಯ, ಆಟದ ಮೈದಾನ, ಆರೋಗ್ಯ, ಸಮುದಾಯ ಭವನ, ಅಂಗನವಾಡಿ ಕೇಂದ್ರ ದಂತಹ ಸೌಲಭ್ಯಗಳು ಈ ಭಾಗದಲ್ಲಿ ಕಾಣುತ್ತಿಲ್ಲ’ ಎಂದು ಗ್ರಾಮಸ್ಥರು ಅಸಮಾಧಾನ ಹೊರಹಾಕಿದರು.
ಗ್ರಾಮಸ್ಥರಾದ ಸಚಿನ್ ಕೆರೆಕೋಡಿ, ಅಜಿತ್, ಸತೀಶ್, ನಾಗರಾಜ್,
ಸಾವಿತ್ರಿ, ಜಯಮ್ಮ, ಅನ್ನಪೂರ್ಣ, ಜನಕಲ್ಲಿ, ಶ್ಯಾಮಲಾ, ಆನಂದ, ಮಹೇಶ್, ವಿಶ್ವನಾಥ್, ಉಮೇಶ್ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.