ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನಸಭೆ ಚುನಾವಣೆ: ಮಹಿಳೆಯರು ನಿರ್ಣಾಯಕ

ಮತದಾರರ ಅಂತಿಮ ಪಟ್ಟಿ ಪ್ರಕಟ: ಜಿಲ್ಲೆಯಲ್ಲಿ 14,41,833 ಅರ್ಹ ಮತದಾರರು
Last Updated 7 ಜನವರಿ 2023, 6:19 IST
ಅಕ್ಷರ ಗಾತ್ರ

ಶಿವಮೊಗ್ಗ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮಹಿಳಾ ಮತದಾರರ ಮನ ಗೆಲ್ಲಲು ರಾಜಕೀಯ ಪಕ್ಷಗಳು ಹೆಚ್ಚಿನ ಕಸರತ್ತು ಮಾಡಬೇಕಿದೆ. ಪುರುಷರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಈ ಬಾರಿ ಚುನಾವಣೆಯಲ್ಲಿ ಮತದಾನಕ್ಕೆ ಅರ್ಹತೆ ಹೊಂದಿದ್ದಾರೆ.

ಜಿಲ್ಲೆಯ ಮತದಾರರ ಪಟ್ಟಿಯನ್ನು ಪರಿಷ್ಕರಿಸಲಾಗಿದೆ. ಅಂತಿಮ ಮತದಾರರ ಪಟ್ಟಿಯಲ್ಲಿ 7,27,310 ಮಹಿಳೆಯರು ಹಾಗೂ 7,14,490 ಪುರುಷರು ಸೇರಿ ಒಟ್ಟು 14,41,833 ಅರ್ಹ ಮತದಾರರು ಇದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ 2023ರ ಅಂತಿಮ ಮತದಾರರ ಪಟ್ಟಿಯನ್ನು ಜಿಲ್ಲಾಧಿಕಾರಿ ಆರ್. ಸೆಲ್ವಮಣಿ
ಬಿಡುಗಡೆಗೊಳಿಸಿದರು.

ಮತದಾರರ ಅಂತಿಮ ಪಟ್ಟಿಯಲ್ಲಿ ಶಿವಮೊಗ್ಗ ಗ್ರಾಮಾಂತರದಲ್ಲಿ 1,03,534 ಪುರುಷ, 1,04,525 ಮಹಿಳೆಯರು, ಮೂವರು ತೃತೀಯ ಲಿಂಗಿಗಳು ಸೇರಿದಂತೆ ಒಟ್ಟು 2,08,062 ಮತದಾರರು ಇದ್ದಾರೆ. ಭದ್ರಾವತಿ ಕ್ಷೇತ್ರದಲ್ಲಿ 1,01,058 ಪುರುಷ, 1,06,546 ಮಹಿಳಾ, ಐವರು ತೃತೀಯ ಲಿಂಗಿ ಸೇರಿದಂತೆ ಒಟ್ಟು 2,07,604 ಮತದಾರರು ಇದ್ದಾರೆ. ಶಿವಮೊಗ್ಗ ನಗರ ಕ್ಷೇತ್ರದಲ್ಲಿ 1,23,770 ಪುರುಷ, 1,29,204 ಮಹಿಳಾ, 15 ತೃತೀಯ ಲಿಂಗಿ ಸೇರಿದಂತೆ 2,52,989 ಮತದಾರರು ಇದ್ದಾರೆ. ತೀರ್ಥಹಳ್ಳಿ ಕ್ಷೇತ್ರದಲ್ಲಿ 91,376 ಪುರುಷ, 93,475 ಮಹಿಳಾ, ಮೂವರು ತೃತೀಯ ಲಿಂಗಿ ಸೇರಿದಂತೆ 1,84,854 ಮತದಾರರು ಇದ್ದಾರೆ. ಶಿಕಾರಿಪುರ ಕ್ಷೇತ್ರದಲ್ಲಿ 98,281 ಪುರುಷ, 97,086 ಮಹಿಳಾ, ನಾಲ್ವರು ತೃತೀಯ ಲಿಂಗಿ ಸೇರಿದಂತೆ ಒಟ್ಟು 1,95,371 ಮತದಾರರು ಇದ್ದಾರೆ.

ಸೊರಬ ಕ್ಷೇತ್ರದಲ್ಲಿ 97,070 ಪುರುಷ, 1,01,326 ಮಹಿಳಾ, ಇಬ್ಬರು ತೃತೀಯ ಲಿಂಗಿ ಸೇರಿದಂತೆ ಒಟ್ಟು 1,92,220 ಮತದಾರರು ಇದ್ದಾರೆ. ಸಾಗರ ಕ್ಷೇತ್ರದಲ್ಲಿ 99,401 ಪುರುಷ, 1,01,326 ಮಹಿಳಾ, ಒಂದು ತೃತೀಯ ಲಿಂಗಿ ಸೇರಿದಂತೆ ಒಟ್ಟು 2,00,728 ಮತದಾರರು ಇದ್ದಾರೆ. ಲಿಂಗಾನುಪಾತ ಅತಿ ಹೆಚ್ಚು ಭದ್ರಾವತಿ ಕ್ಷೇತ್ರದಲ್ಲಿ 1054 ಇದ್ದು, ಅತಿ ಕಡಿಮೆ ಸೊರಬ ಕ್ಷೇತ್ರದಲ್ಲಿ 980 ಇದೆ ಎಂದರು.

ಅಂತಿಮ ಮತದಾರರ ಪಟ್ಟಿಯಲ್ಲಿ ಮತದಾರರ ಲಿಂಗಾನುಪಾತ 1000 ಪುರುಷ ಮತದಾರರಿಗೆ 1,018 ಮಹಿಳೆಯರು ಇದ್ದಾರೆ. ಮತದಾರರ ಪಟ್ಟಿಯಲ್ಲಿ ಹೊಸದಾಗಿ 22,185 ಯುವ ಮತದಾರರ ಸೇರ್ಪಡೆಯಾಗಿದ್ದು, ಇವರಲ್ಲಿ 11,760 ಪುರುಷ ಹಾಗೂ 10,419 ಮಹಿಳಾ ಮತದಾರರು ಇದ್ದಾರೆ. ಜಿಲ್ಲೆಯಲ್ಲಿ ಪ್ರಸ್ತುತ 1,775 ಮತಗಟ್ಟೆಗಳು ಇವೆ ಎಂದು ಅವರು ಹೇಳಿದರು. ಲಿಂಗಾನುಪಾತ ಅತಿ ಹೆಚ್ಚು ಭದ್ರಾವತಿ ಕ್ಷೇತ್ರದಲ್ಲಿ 1054 ಇದ್ದು, ಅತಿ ಕಡಿಮೆ ಸೊರಬ ಕ್ಷೇತ್ರದಲ್ಲಿ 980 ಇದೆ ಎಂದರು.

ಕಳೆದ ನವೆಂಬರ್ 9ರಂದು ಪ್ರಕಟಿಸಲಾಗಿದ್ದ ಕರಡು ಮತದಾರರ ಪಟ್ಟಿಯಲ್ಲಿ ಒಟ್ಟು 14,34,138 ಮತದಾರರ ಹೆಸರು ಪ್ರಕಟಿಸಲಾಗಿತ್ತು. ಅಂತಿಮ ಪಟ್ಟಿಯಲ್ಲಿ 40,767 ಮತದಾರರನ್ನು ಹೊಸದಾಗಿ ಸೇರ್ಪಡೆಗೊಳಿಸಲಾಗಿದ್ದು, 33072 ಮತದಾರರ ಹೆಸರು ಕೈ ಬಿಡಲಾಗಿದೆ. 11651 ತಿದ್ದುಪಡಿ ಮಾಡಲಾಗಿದೆ. ತೆಗೆದು ಹಾಕಿರುವುದಕ್ಕೆ 11873 ಮರಣ, 17064 ಸ್ಥಳಾಂತರ, 1058 ಪುನರಾವರ್ತನೆ ಮತ್ತು 3077 ವಲಸೆ ಕಾರಣವಾಗಿದೆ. ಕರಡು ಪಟ್ಟಿಯಲ್ಲಿ ಲಿಂಗಾನುಪಾತ 1 ಸಾವಿರ ಪುರುಷ ಮತದಾರರಿಗೆ 1014 ಮಹಿಳಾ ಮತದಾರರು ಇದ್ದರು ಎಂದು ಅವರು ಮಾಹಿತಿ ನೀಡಿದರು.

ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

....

ಹೆಸರು ಸೇರ್ಪಡೆಗೆ ಇನ್ನೂ ಅವಕಾಶ

2023ರ ಸಾರ್ವತ್ರಿಕ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಅರ್ಹ ಮತದಾರರು ಮತದಾರರ ಪಟ್ಟಿಗೆ ಚುನಾವಣಾ ಆಯೋಗ ನಿಗದಿಪಡಿಸುವ ದಿನಾಂಕದವರೆಗೂ ಹೆಸರು ಸೇರಿಸಲು ಅವಕಾಶವಿರುತ್ತದೆ. ನಮೂನೆ–6 ಸೇರ್ಪಡೆ, ನಮೂನೆ–6ಎ ಅನಿವಾಸಿ ಭಾರತೀಯರು ಹೆಸರು ನೋಂದಾಯಿಸಿಕೊಳ್ಳಲು, 6–ಬಿ ಮತದಾರರ ಪಟ್ಟಿಯೊಂದಿಗೆ ಆಧಾರ್ ಜೋಡಣೆ ಮಾಡಿಕೊಳ್ಳಲು, ನಮೂನೆ–7 ತೆಗೆದು ಹಾಕಲು, ನಮೂನೆ–8ರಲ್ಲಿ ತಿದ್ದುಪಡಿ, ವರ್ಗಾವಣೆ, ಬದಲಿ ಎಪಿಕ್‌ಗೆ ಮನವಿ ಮತ್ತು ಅಂಗವೈಕಲ್ಯ ಹೊಂದಿರುವ ಮತದಾರರು ವಿವರ ದಾಖಲಿಸಲು ಅವಕಾಶವಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಹೊನ್ನಳ್ಳಿ ತಿಳಿಸಿದರು.

ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಸೇರಿಸಲು https://ceo.karnataka.gov.in ವೆಬ್‌ಸೈಟ್‌ ನೋಡಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT