ಸೋಮವಾರ, 3 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಣಗುತ್ತಿರುವ ಕೆರೆಗಳು, ಅಂತರ್ಜಲ ಕುಸಿತ

ಅಂಜನಾಪುರ, ಕಸಬಾ, ಉಡುಗಣಿ, ತಾಳಗುಂದ ಹೋಬಳಿಯ ಕೆಲವು ಗ್ರಾಮಗಳಲ್ಲಿ ಟ್ಯಾಂಕರ್‌ ಮೂಲಕ ನೀರು
Last Updated 22 ಮೇ 2019, 19:55 IST
ಅಕ್ಷರ ಗಾತ್ರ

ಶಿಕಾರಿಪುರ: ಮುಂಗಾರು ಪೂರ್ವ ಮಳೆ ಸುರಿಯದ ಕಾರಣ ತಾಲ್ಲೂಕಿನ ಬಹುತೇಕ ಕೆರೆಕಟ್ಟೆಗಳು ಖಾಲಿಯಾಗಿವೆ. ಹೀಗಾಗಿ ಅಂತರ್ಜಲ ಪ್ರಮಾಣ ಕುಸಿಯುತ್ತಿದೆ.

ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ಜನತೆ ಟ್ಯಾಂಕರ್‌ ನೀರನ್ನು ಅವಲಂಬಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ತಾಲ್ಲೂಕಿನಲ್ಲಿ ಬಿಸಿಲ ತಾಪಮಾನ ಹೆಚ್ಚಿದ್ದು, ಕೆರೆಗಳು ಒಣಗುತ್ತಿವೆ. ಕೆಲವು ಗ್ರಾಮಗಳಲ್ಲಿ ಅಂತರ್ಜಲ ಮಟ್ಟ ಕುಸಿದಿರುವುದರಿಂದ ಕೊಳವೆ ಬಾವಿಗಳಲ್ಲಿ ನೀರು ಬರುತ್ತಿಲ್ಲ. ಗ್ರಾಮಸ್ಥರು ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಬೇಕು ಎಂದು ಮನವಿ ಮಾಡುತ್ತಿದ್ದಾರೆ. ಗ್ರಾಮ ಪಂಚಾಯಿತಿ ಕೆಲವು ಗ್ರಾಮಗಳಲ್ಲಿ ಖಾಸಗಿ ಮಾಲೀಕರ ಕೊಳವೆ ಬಾವಿಯಿಂದ ಗ್ರಾಮಸ್ಥರಿಗೆ ಕುಡಿಯುವ ನೀರಿನ ಸರಬರಾಜು ಮಾಡುವ ಕಾರ್ಯ ಮಾಡುತ್ತಿದೆ. ಕೆಲವು ಗ್ರಾಮಗಳಲ್ಲಿ ಖಾಸಗಿ ಜಮೀನಿನ ಮಾಲೀಕರು ಕೃಷಿ ಚಟುವಟಿಕೆ ನಡೆಸಲು ನೀರು ಕಡಿಮೆಯಾಗುತ್ತದೆ ಎನ್ನುವ ಉದ್ದೇಶದಿಂದ ನೀರು ನೀಡಲು ಹಿಂದೇಟು ಹಾಕುತ್ತಿದ್ದಾರೆ.

ಪ್ರಸ್ತುತ ಕೆಲವು ಗ್ರಾಮಗಳಲ್ಲಿ ಕೊಳವೆ ಬಾವಿ ನೀರಿನ ಮಟ್ಟ ಉತ್ತಮವಾಗಿದೆ. ಆದರೆ ಇನ್ನೂ ಕೆಲವು ದಿನಗಳಲ್ಲಿ ಮಳೆಯಾಗದಿದ್ದರೆ, ಅಂತರ್ಜಲ ಮಟ್ಟ ಕುಸಿಯುವ ಸಂಭವ ಇದೆ.

ಪ್ರಸ್ತುತ ಅಂಜನಾಪುರ, ಕಸಬಾ, ಉಡುಗಣಿ ಹಾಗೂ ತಾಳಗುಂದ ಹೋಬಳಿಯ ಕೆಲವು ಗ್ರಾಮಗಳಲ್ಲಿ ಗ್ರಾಮ ಪಂಚಾಯಿತಿ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡುತ್ತಿದೆ.

ತಾಲ್ಲೂಕಿನ ಹಲವು ಹೋಬಳಿಗಳಲ್ಲಿ ತೋಟದ ಮಾಲೀಕರು ತಮ್ಮ ಅಡಿಕೆ ಬೆಳೆಯನ್ನು ಉಳಿಸಿಕೊಳ್ಳಲು ಹರ ಸಾಹಸ ಪಡುತ್ತಿದ್ದಾರೆ. ಪ್ರಸ್ತುತ ಕೆಲವು ತೋಟಗಳಲ್ಲಿ ಅಂತರ್ಜಲ ಪ್ರಮಾಣ ಕುಸಿಯುವ ಲಕ್ಷಣಗಳು ಕಂಡು ಬರುತ್ತಿವೆ. ಮುಂಗಾರು ಮಳೆ ಬಾರದಿದ್ದರೆ ತೋಟಗಳನ್ನು ಉಳಿಸಿಕೊಳ್ಳುವುದು ಹೇಗೆ ಎಂಬ ಚಿಂತೆ ರೈತರನ್ನು ಕಾಡಿದೆ.

‘ಮಾರವಳ್ಳಿ ಸೇರಿದಂತೆ ಹೊಸೂರು ಹೋಬಳಿಯ ಹಲವು ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇದ್ದು, ಹಲವು ಕೊಳವೆ ಬಾವಿಗಳಲ್ಲಿ ಅಂತರ್ಜಲ ಕುಸಿದಿದೆ. ತಾಲ್ಲೂಕು ಆಡಳಿತ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲು ಗಮನ ಹರಿಸಬೇಕು. ಕಾರ್ಯಪಡೆ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ಜನರಿಗೆ ನೀರನ್ನು ಒದಗಿಸಬೇಕು’ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಪ್ರಸ್ತುತ ಕೆಲವು ಗ್ರಾಮಗಳಲ್ಲಿ ಮಾತ್ರ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿದೆ. ಮುಂದಿನ ದಿನಗಳಲ್ಲಿ ಮಳೆ ಬಾರದೇ ಇದೇ ರೀತಿ ತಾಪಮಾನ ಹೆಚ್ಚಾದರೆ ಜನರು ಕುಡಿಯುವ ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಲಿದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT