ಶನಿವಾರ, ಸೆಪ್ಟೆಂಬರ್ 18, 2021
29 °C

ಕೇಂದ್ರ ಸಂಪುಟ ವಿಸ್ತರಣೆಯಲ್ಲಿ ರಾಜ್ಯಕ್ಕೆ ಎರಡು ಸ್ಥಾನದ ನಿರೀಕ್ಷೆ: ಈಶ್ವರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಕೇಂದ್ರ ಸಚಿವ ಸಂಪುಟ ವಿಸ್ತರಣೆ ವೇಳೆ ರಾಜ್ಯಕ್ಕೆ ಎರಡು ಸ್ಥಾನ ಸಿಗುವ ಸಾಧ್ಯತೆ ಇದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಅವರು ಮಾತನಾಡಿದರು.

ಸುರೇಶ್ ಅಂಗಡಿ ನಿಧನದಿಂದ ಒಂದು ಸ್ಥಾನ ತೆರವಾಗಿದೆ. ಅದರ ಜತೆಗೆ ರಾಜ್ಯಕ್ಕೆ ಮತ್ತೊಂದು ಸ್ಥಾನ ನೀಡುವಂತೆ ಮನವಿ ಮಾಡುತ್ತೇವೆ. ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಸಂಪುಟದಲ್ಲಿ ಸ್ಥಾನ ದೊರಕುವ ಕುರಿತು ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಪ್ರತಿಕ್ರಿಯಿಸಿದರು.

ಸಚಿವ ಸಿ.ಪಿ.ಯೋಗೀಶ್ವರ್ ದೆಹಲಿ ಭೇಟಿ ವಿಚಾರದಲ್ಲಿ ಯಾವುದೇ ವಿಶೇಷ ಇಲ್ಲ. ರಾಜ್ಯದ ಸಚಿವರು ದೆಹಲಿಗೆ ಹೋಗಬಾರದು ಎಂದು ಸಂವಿಧಾನದಲ್ಲಿ ಏನಾದರೂ ಬರೆದಿದ್ದಾರೆಯೇ? ಬಿಜೆಪಿ ನಾಯಕರು ದೆಹಲಿಗೆ ಹೋದರೆ ಏಕೆ ಪ್ರಶ್ನೆ ಮಾಡ್ತೀರಾ ಎಂದು ಮರು ಪ್ರಶ್ನಿಸಿದರು.

ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಜಕೀಯ ನಿವೃತ್ತಿ ನಿವೃತ್ತಿ ಪಡೆಯುವುದಿಲ್ಲ ಎಂದು ಹೇಳಿರುವುದು ಸಂತಸದ ವಿಷಯ. ಒಂದು ವೇಳೆ ನಿವೃತ್ತರಾದರೂ ಕೊನೆಯವರೆಗೂ ಬಿಜೆಪಿಯಲ್ಲೇ ಇರುವುದಾಗಿ ಕೇಳಿದ್ದಾರಲ್ಲ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು