ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

Last Updated 26 ಜೂನ್ 2021, 4:03 IST
ಅಕ್ಷರ ಗಾತ್ರ

ಶಿವಮೊಗ್ಗ: ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ 7ರಿಂದ ಸೋಮವಾರ ಬೆಳಿಗ್ಗೆ 5ವರೆಗೆ ವಾರಾಂತ್ಯ ಕರ್ಫ್ಯೂ ಕಟ್ಟುನಿಟ್ಟಿನಿಂದ ಜಾರಿಗೊಳಿಸಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.

‘ಕರ್ಫ್ಯೂ ಅವಧಿಯಲ್ಲಿ ಅವಶ್ಯಕ ಮತ್ತು ತುರ್ತು ಚಟುವಟಿಕೆಗಳನ್ನು ಹೊರತುಪಡಿಸಿ ಬೇರೆಲ್ಲ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ದಿನದ 24 ಗಂಟೆ ಕಾರ್ಯ ನಿರ್ವಹಿಸಬೇಕಾದ, ತುರ್ತು ಹಾಗೂ ಅವಶ್ಯಕ ಸೇವೆಗಳನ್ನು ಒದಗಿಸುವ ಎಲ್ಲ ಕೈಗಾರಿಕೆಗಳು, ಕಂಪನಿಗಳು ಮತ್ತು ಸಂಸ್ಥೆಗಳು ಕಾರ್ಯ ನಿರ್ವಹಿಸಲು ಅನುಮತಿ ನೀಡಲಾಗಿದೆ. ಅಂತಹ ಸಂಸ್ಥೆಗಳು ಸಿಬ್ಬಂದಿಗೆ ಕಡ್ಡಾಯವಾಗಿ ಗುರುತಿನ ಚೀಟಿಯನ್ನು ನೀಡಬೇಕು. ಟೆಲಿಕಾಂ ಮತ್ತು ಇಂಟರ್‌ನೆಟ್ ಸೇವೆ ಒದಗಿಸುವ ಸಂಸ್ಥೆಗಳ ಸಿಬ್ಬಂದಿ ವಾಹನ ಸಂಚಾರಕ್ಕೆ ಅವಕಾಶವಿದೆ’ ಎಂದು ಮಾಹಿತಿ ನೀಡಿದ್ದಾರೆ.

ದಿನಸಿ, ತರಕಾರಿ, ಹಾಲು ಅವಶ್ಯಕ ವಸ್ತುಗಳ ಮಾರಾಟ ಮಳಿಗೆಗಳಿಗೆ ಬೆಳಿಗ್ಗೆ 6ರಿಂದ ಮಧ್ಯಾಹ್ನ 2ರವರೆಗೆ ಅವಕಾಶವಿದೆ. ತಳ್ಳುಗಾಡಿ ಮಾರಾಟಗಾರರು ಸಹ ಈ ಅವಧಿಯಲ್ಲಿ ವ್ಯಾಪಾರ ಮಾಡಬಹುದು. ಬೆಳಿಗ್ಗೆ 6ರಿಂದ ಮಧ್ಯಾಹ್ನ 2ರವರೆಗೆ ಮದ್ಯ ಮಾರಾಟ ಅಂಗಡಿಗಳಿಂದ ಪಾರ್ಸೆಲ್‌ಗೆ ಮಾತ್ರ ಅವಕಾಶವಿದೆ. ಹೋಂ ಡೆಲಿವರಿಗೆ ದಿನವಿಡೀ ಅವಕಾಶವಿದೆ. ರೆಸ್ಟೋರೆಂಟ್‌ಗಳಲ್ಲಿ ಪಾರ್ಸೆಲ್‌ಗೆ ಮಾತ್ರ ಅವಕಾಶವಿದೆ ಎಂದು ತಿಳಿಸಿದ್ದಾರೆ.

ಈಗಾಗಲೇ ನಿಗದಿಯಾಗಿರುವ ವಿವಾಹ ಕಾರ್ಯಕ್ರಮವನ್ನು ಸರ್ಕಾರದ ಮಾರ್ಗಸೂಚಿ ಪ್ರಕಾರ, 40 ಮಂದಿಗೆ ಮೀರದಂತೆ ಮನೆಯಲ್ಲಿ ನೆರವೇರಿಸಬಹುದು. ಕೋವಿಡ್ ಮಾರ್ಗಸೂಚಿಯನ್ನು ಪಾಲಿಸಿಕೊಂಡು ಗರಿಷ್ಠ 5 ಮಂದಿಗೆ ಸೀಮಿತವಾಗಿ ಅಂತ್ಯಸಂಸ್ಕಾರ ನಡೆಸಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT