ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಳೆಹೊನ್ನೂರು: ಈಜಲು ಹೋಗಿ ನೀರಲ್ಲಿ ಮುಳುಗಿ ಸಾವು

Published 4 ಏಪ್ರಿಲ್ 2024, 15:15 IST
Last Updated 4 ಏಪ್ರಿಲ್ 2024, 15:15 IST
ಅಕ್ಷರ ಗಾತ್ರ

ಹೊಳೆಹೊನ್ನೂರು: ಸಮೀಪದ ಕೂಡಲಿ ಗ್ರಾಮದ ತುಂಗಭದ್ರಾ ಸಂಗಮದಲ್ಲಿ ಸ್ನೇಹಿತರೊಂದಿಗೆ ಈಜುಲು ತೆರಳಿದ್ದ ಯುವಕನೊಬ್ಬ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ.  

ಮೃತ ವ್ಯಕ್ತಿಯನ್ನು ಶಿವಮೊಗ್ಗದ ಅಣ್ಣಾನಗರದ ಮುಬಾರಕ್ (18) ಎಂದು ಗುರುತಿಸಲಾಗಿದೆ. ಪಟ್ಟಣದ ಐಟಿಐ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಪ್ರತಿನಿತ್ಯ ಶಿವಮೊಗ್ಗದಿಂದ ಪಟ್ಟಣದ ಕಾಲೇಜಿಗೆ ವ್ಯಾಸಂಗಕ್ಕೆ ಬರುತ್ತಿದ್ದರು. ಎಂದಿನಂತೆ ಕಾಲೇಜಿಗೆ ಹೋಗಿ ಬರುವುದಾಗಿ ಮನೆಯಲ್ಲಿ ತಿಳಿಸಿ ಕೂಡಲಿ ಸಂಗಮದಲ್ಲಿ ಸ್ನಾನ ಮಾಡಲು ಸ್ನೇಹಿತರೊಂದಿಗೆ ತೆರಳಿದ್ದಾಗ ಅವಘಡ ನಡೆದಿದೆ.

ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ನಿರ್ಲಕ್ಷ್ಯ: ಮಾ.29ರಿಂದ ಭದ್ರಾನದಿಗೆ ಹೆಚ್ಚಿನ ನೀರು ಹರಿಸುತ್ತಿವುದರಿಂದ ನೀರಿನ ಪ್ರಮಾಣ ಹೆಚ್ಚಾಗಿದೆ. ಆದರೆ, ಯುಗಾದಿ ಅಮಾವಾಸ್ಯೆಯ ಪುಣ್ಯಸ್ನಾನಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿಗೆ  ಆಗಮಿಸಲಿದ್ದಾರೆ. ಆದರೂ ಅಹಿತಕರ ಘಟನೆ ನಡೆಯದಂತೆ ಗ್ರಾಮಾಡಳಿತ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಪೊಲೀಸರನ್ನೂ ನಿಯೋಜಿಸಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. 

ಮಕ್ಕಳೊಂದಿಗೆ ಸ್ನಾನಕ್ಕೆ ಆಗಮಿಸುವ ಭಕ್ತರಿಗೆ ನದಿ ತಟದಲ್ಲಿ ಸುರಕ್ಷತೆ ಇಲ್ಲ. ಮತ್ತೆ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT