ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಫಾರ್ಮಸಿಸ್ಟ್ ಕೆಲಸ ಮಹತ್ವದ್ದು’

Last Updated 27 ಸೆಪ್ಟೆಂಬರ್ 2020, 3:14 IST
ಅಕ್ಷರ ಗಾತ್ರ

ಸಾಗರ: ವೈದ್ಯರು ಸೂಚಿಸುವ ಔಷಧಿಗಳನ್ನು ಸಕಾಲದಲ್ಲಿ ಸರಿಯಾದ ಪ್ರಮಾಣದಲ್ಲಿ ರೋಗಿಗಳಿಗೆ ನೀಡುವ ಫಾರ್ಮಸಿಸ್ಟ್ ಕೆಲಸ ಅತ್ಯಂತ ಜವಾಬ್ದಾರಿಯುಳ್ಳದ್ದು ಎಂದು ಆರೋಗ್ಯ ಇಲಾಖೆ ನೌಕರರ ಒಕ್ಕೂಟದ ಜಿಲ್ಲಾಧ್ಯಕ್ಷ ಮ.ಸ.ನಂಜುಂಡಸ್ವಾಮಿ ಹೇಳಿದರು.

ಇಲ್ಲಿನ ತಾಯಿ ಮಗು ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಫಾರ್ಮಸಿ ಅಧಿಕಾರಿಗಳ ಸಂಘದ ತಾಲ್ಲೂಕು ಶಾಖೆ ಶುಕ್ರವಾರ ಏರ್ಪಡಿಸಿದ್ದ ವಿಶ್ವ ಫಾರ್ಮಸಿಸ್ಟ್ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಆಸ್ಪತ್ರೆಯಲ್ಲಿ ವೈದ್ಯರು, ದಾದಿಯರಷ್ಟೇ ಪ್ರಾಮುಖ್ಯತೆ ಫಾರ್ಮಸಿಸ್ಟ್ ಕೆಲಸಕ್ಕೂ ಇದೆ. ರಾಜ್ಯದ ಹಲವು ಸರ್ಕಾರಿ ಆಸ್ಪತ್ರೆಗಳಲ್ಲಿ ಫಾರ್ಮಸಿಸ್ಟ್ ಹುದ್ದೆ ಖಾಲಿ ಇದೆ. ಈ ಹುದ್ದೆಗಳನ್ನು ತುಂಬಬೇಕು ಎಂಬ ಬೇಡಿಕೆ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಫಾರ್ಮಸಿಸ್ಟ್ ಸಂಘದವರು ಬಹುಕಾಲದಿಂದ ಹೋರಾಡುತ್ತಿದ್ದಾರೆ. ಸರ್ಕಾರ ಅವರ ಬೇಡಿಕೆಗಳಿಗೆ ಸ್ಪಂದಿಸಬೇಕು ಎಂದು ಹೇಳಿದರು.

ಫಾರ್ಮಸಿಸ್ಟ್ ಸಂಘದ ತಾಲ್ಲೂಕು ಶಾಖೆ ಅಧ್ಯಕ್ಷ ವೈ.ಮೋಹನ್, ‘ವೈದ್ಯರು ಹಾಗೂ ರೋಗಿಗಳ ನಡುವೆ ಫಾರ್ಮಸಿಸ್ಟ್ ಸದಾ ಸೇತುವೆಯಂತೆ ಕೆಲಸ ಮಾಡುತ್ತಾರೆ. ರೋಗಿಗಳಿಗೆ ಔಷಧ ವಿತರಣೆಯ ಜೊತೆಗೆ ತಿಳಿವಳಿಕೆ ಮೂಡಿಸುವ ಕೆಲಸವನ್ನೂ ಅವರು ಮಾಡಿಕೊಂಡು ಬಂದಿದ್ದಾರೆ’ ಎಂದರು.

ಹಿರಿಯ ಫಾರ್ಮಸಿಸ್ಟ್ ಎಚ್.ಡಿ.ಇಳಿಗೇರ್ ಅವರನ್ನು ಸನ್ಮಾನಿಸಲಾಯಿತು. ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮೋಹನ್ ಕೆ.ಎಸ್. ಶಂಕರ್, ನಿರ್ಮಲ, ಭಾರತಿ ಎಸ್. ಅಹಲ್ಯ, ಹೇಮಾ, ಅಶ್ವಿನಿ, ಶಾಲಿನ ಎಸ್. ಇದ್ದರು. ರೇಣುಕಮ್ಮ ಪ್ರಾರ್ಥಿಸಿದರು. ರವಿ ಎ.ಎಸ್. ಸ್ವಾಗತಿಸಿದರು. ಸತೀಶ್ ವಂದಿಸಿದರು. ಪುಷ್ಪಾಪಿ.ಎಸ್. ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT