ಶಿವಮೊಗ್ಗ: ' ಶಿಕಾರಿಪುರದಿಂದ ಸ್ಪರ್ಧಿಸುವ ವಿಚಾರದಲ್ಲಿ ತಂದೆಯವರ ಮಾರ್ಗದರ್ಶನ ಹಾಗೂ ಪಕ್ಷದ ನಿರ್ಧಾರದಂತೆ ನಡೆದುಕೊಳ್ಳುತ್ತೇನೆ' ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.

ಅಂಜನಾಪುರ ಜಲಾಶಯಕ್ಕೆ ಶುಕ್ರವಾರ ಬಾಗಿನ ಬಿಟ್ಟು ಮಾತನಾಡಿ, ತಂದೆಯವರ ಹೇಳಿಕೆಯನ್ನ ಆಧರಿಸಿಯೇ ನಾನು ಮುಂದಿನ ನಿರ್ಧಾರ ಮಾಡ್ತೇನೆ. ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷನಾಗಿ ರಾಜ್ಯಾದ್ಯಂತ ಪ್ರವಾಸ ಮಾಡೋದು ನನ್ನ ಆದ್ಯ ಕರ್ತವ್ಯ ಎಂದರು.

ಹಿಂದಿನಿಂದಲೂ ಪಕ್ಷ ಸಂಘಟನೆ ಮಾಡಿದ್ದೇನೆ. ಮುಂದೆಯೂ ಮಾಡುತ್ತೇನೆ. ಶಿಕಾರಿಪುರದ ಮುಖಂಡರು, ಕಾರ್ಯಕರ್ತರು ತಂದೆಯ ಮೇಲೆ ಒತ್ತಡ ಹೇರಿದ್ದರು. ತಿಂಗಳ ಹಿಂದೆ ಬೆಂಗಳೂರಿಗೂ ಬಂದು, ಒತ್ತಡ ಕೂಡ ಹಾಕಿದ್ದರು.ಅದರಂತೆ ತಂದೆಯವರು ಇಂದು ತೀರ್ಮಾನ ಪ್ರಕಟಿಸಿದ್ದಾರೆ ಎಂದರು.

ಇದರಿಂದ ಯಡಿಯೂರಪ್ಪನವರಿಗೆ ನಿವೃತ್ತಿ ಅಂತಾ ಅಲ್ಲ . ಅವರ ಡಿಕ್ಷನರಿಯಲ್ಲಿ ನಿವೃತ್ತಿ ಎನ್ನುವ ಪದ ಇಲ್ಲ. ಹಿಂದೆ ಕೂಡ ಬಿಜೆಪಿ ಸಂಘಟನೆ ಕೆಲಸ ಮಾಡಿದ್ರು. ಮುಂದೆಯೂ ಮಾಡುತ್ತಾರೆ. ಬಿಜೆಪಿಯನ್ನು ಸ್ಪಷ್ಟ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ತರುತ್ತೇನೆ ಎಂದು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವಾಗ ಹೇಳಿದ್ದರು. ಈ ಬಗ್ಗೆ ವಿರೋಧ ಪಕ್ಷಗಳಿಗೂ ಸವಾಲು ಹಾಕಿದ್ದರು.ಆ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಕೂಡ ಮಾಡ್ತಾರೆ. ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮ ಹಾಕ್ತಾರೆ ಎಂದು ವಿಜಯೇಂದ್ರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಇದನ್ನೂ ಓದಿ..

ಶಿಕಾರಿಪುರದಿಂದಲೇ ಪುತ್ರ ಬಿ.ವೈ. ವಿಜಯೇಂದ್ರ ಸ್ಪರ್ಧೆ:ಯಡಿಯೂರಪ್ಪ ಸ್ಪಷ್ಟನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.